ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚು ಪತ್ತೆಯಾಗುತ್ತಿವೆ. ಹೀಗಾಗಿ ಆರೋಗ್ಯ ಇಲಾಖೆ ಮಾಸ್ಟರ್ ಪ್ಲಾನ್ ಮಾಡಿದ್ದು ಭ್ರೂಣ ಹತ್ಯೆ ಸಂಪೂರ್ಣ ನಿರ್ಮೂಲನೆ ಮಾಡಲು ಮುಂದಾಗಿದೆ.
ರಾಜ್ಯದಲ್ಲಿ ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ನಗದು ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿದೆ. ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.ಭ್ರೂಣ ಹತ್ಯೆ ಮಟ್ಟ ಹಾಕಲು ಆರೋಗ್ಯ ಇಲಾಖೆ ಹೊಸ ತಂತ್ರ ರೂಪಿಸಿದೆ. ರಾಜ್ಯದ ಜನರನ್ನೇ ದಾಳವಾಗಿಸಿಕೊಂಡು ಭ್ರೂಣ ಹತ್ಯೆಯನ್ನು ಬುಡಸಮೇತ ಕಿತ್ತು ಹಾಕಲು ಮುಂದಾಗಿದೆ.
ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯುವ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ. ಯಾವುದೇ ಭಾಗದಲ್ಲಿ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ರೆ ಸಾಕು.
ಸುಳಿವು ನೀಡಿದವರಿಗೆ ಒಂದು ಲಕ್ಷ ಬಹುಮಾನ ಹಣ ನೀಡುತ್ತೇವೆ. ಮಾಹಿತಿ ನೀಡಿದವರ ಮಾಹಿತಿಯನ್ನ ಕೂಡಾ ಗೌಪ್ಯವಾಗಿ ಇಡಲಾಗುತ್ತೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಹೆಲ್ಪ್ ಲೈನ್ ತೆರೆದಿದ್ದು 080- 25202264/65 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ. ಸರಿಯಾದ ಮಾಹಿತಿ ನೀಡಿದ್ರೆ ಒಂದ ಲಕ್ಷ ಬಹುಮಾನ ನೀಡುವುದರ ಜೊತೆಗೆ ಯಾವುದೇ ಮಾಹಿತಿ ಬಹಿರಂಗ ಪಡಿಸದೇ ಇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ.