ಬೆಂಗಳೂರು: ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಡೈರಿ ಸರ್ಕಲ್ ಬಳಿ ನಿನ್ನೆ ರಾತ್ರಿ ಲಾರಿ ಮೋಟರ್ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಮಹೇಶ್(32) ಎಂಬುವರು ಮೃತಪಟ್ಟಿದ್ದಾರೆ. ಮೃತರು ಚಿಕ್ಕಮಗಳೂರು ನಿವಾಸಿ ಎಂದು ಹೇಳಲಾಗಿದೆ.
ಮೃತರು ಮಣಿಪಾಲ್ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುವಾಗ ಈ ದುರ್ಘಟನೆ ಸಂಭವಿಸಿರುತ್ತದೆ.
ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ನಿನ್ನೆ ರಾತ್ರಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತುರೈ ರಾಜ್(36) ಮೃತಪಟ್ಟಿರುತ್ತಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡ್ಲುಹಳ್ಳಿ ಬಳಿ ನಿನ್ನೆ ಸಂಜೆ ಕಾರ್ ಚಾಲಕ ಅತಿ ವೇಗವಾಗಿ ಚಲಾಯಿಸಿ ಕಾಂಪೌಂಡ್ ಗೆ ಡಿಕ್ಕಿ ಹೊಡೆದುಕೊಂಡು ಮಂಜುನಾಥ್(42) ಮೃತಪಟ್ಟಿರುತ್ತಾರೆ.