ಬೆಂಗಳೂರು: ಕಳೆದ ಭಾನುವಾರ ಇಹಲೋಕ ತ್ಯಜಿಸಿದ ಸಚಿವ ಹಾಗೂ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸುಧಾಕರ್ ಅವರ ಸ್ಥಾನಕ್ಕೆ ಮುಂದಿನ 6 ತಿಂಗಳಲ್ಲಿ ಉಪ-ಚುನಾವಣೆ ಎದುರಾಗಲಿದ್ದು, ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ನಡೆಯನ್ನು ಅನುಸರಿಸುತ್ತಿದ್ದಾರೆ. ಇಬ್ಬರಿಗೆ ಡಿಕೆಶಿ ಕರೆ ಮಾಡಿದ್ದು ಸದ್ಯದಲ್ಲೇ ಘೋಷಣೆಯಾಗುವ ಕ್ಷೇತ್ರದ ಉಪ-ಚುನಾವಣೆಗೆ ಸಿದ್ಧರಾಗಿರಿ ಎಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿಯಲ್ಲಿದ್ದುಕೊಂಡು 2018 ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪೂರ್ಣಿಮಾ ಶ್ರೀನಿವಾಸ್ ಶಾಸಕಿಯಾಗಿ ಕ್ಷೇತ್ರದಲ್ಲಿ ಆಯ್ಕೆಯಾಗಿದ್ರು. 5 ವರ್ಷಗಳ ಕಾಲ ಕ್ಷೇತ್ರದಲ್ಲಿ ಶಾಸಕಿಯಾಗಿ ಕಾರ್ಯನಿರ್ವಹಣೆ ಮಾಡಿದ ಪೂರ್ಣಿಮಾ ಶ್ರೀನಿವಾಸ್ ಜನಪ್ರಿಯತೆಯನ್ನು ಗಳಿಸಿಕೊಂಡಿದ್ದರು. ಆದ್ರೆ 2023 ರಲ್ಲಿ ಎದುರಾದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು ಕಾಂಗ್ರೆಸ್ನ ಡಿ.ಸುಧಾಕರ್ ವಿರುದ್ಧ ಪರಾಭವಗೊಂಡಿದ್ದರು. ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪೂರ್ಣಿಮಾ ಶ್ರೀನಿವಾಸ್ ಬಿಜೆಪಿಗೆ ಗುಡ್ಬೈ ಹೇಳಿ, ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಸದ್ಯ ಅವರ ಪತಿ ಶ್ರೀನಿವಾಸ್ ಕೂಡ ಕಾಂಗ್ರೆಸ್ನಿAದ ವಿಧಾನಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಗೊಲ್ಲ ಸಮುದಾಯಕ್ಕೆ ಪೂರ್ಣಿಮಾ ಶ್ರೀನಿವಾಸ್ಗೆ ಕ್ಷೇತ್ರದ ಮೇಲೆ ಹಿಡಿತವೂ ಇದೆ, ಪರಿಚಯವೂ ಇದೆ. ಹೀಗಾಗಿ, ಕ್ಷೇತ್ರದಲ್ಲಿ ಉಪ- ಚುನಾವಣೆ ಎದುರಾದ್ರೆ, ನಿಮ್ಮನ್ನು ಕೂಡ ಅಭ್ಯರ್ಥಿಯ ರೇಸ್ನಲ್ಲಿ ಪರಿಗಣಿಸಬಹುದು. ನೀವು ಸಿದ್ಧರಾಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ ಎನ್ನಲಾಗಿದೆ.ಇನ್ನು ಸಂಪ್ರದಾಯವಾಗಿ ಯಾವುದೇ ಕ್ಷೇತ್ರದಲ್ಲಿ ಶಾಸಕರು ನಿಧನರಾದ್ರೆ, ಅಂತಹ ಕ್ಷೇತ್ರದಲ್ಲಿ ಶಾಸಕರಾಗಿದ್ದವರ ಕುಟುಂಬಕ್ಕೆ ಟಿಕೆಟ್ ಕೊಡುವುದು ಕಾಂಗ್ರೆಸ್ನಲ್ಲಿ ಚಾಲ್ತಿಯಲ್ಲಿದೆ. ಹೀಗಾಗಿ, ಈಗ ವಿಧಿವಶರಾಗಿರುವ ಡಿ.ಸುಧಾಕರ್ ಅವರ ಸ್ಥಾನಕ್ಕೆ ಅವರ ಪುತ್ರ ಸುಹಾಸ್ ಸುಧಾಕರ್ ಆರ್ಹರಾಗಿದ್ದು, ಅವರಿಗೂ ಉಪ-ಚುನಾವಣೆಗೆ ಸಿದ್ಧರಾಗಿರಿ ಎಂದು ಡಿಸಿಎಂ ಡಿಕೆಶಿ ಸೂಚಿಸಿದ್ದಾರೆ ಎನ್ನಲಾಗಿದೆ.ಒಟ್ಟಾರೆ, ಹಿರಿಯೂರು ವಿಧಾನಸಭಾ ಉಪ-ಚುನಾವಣೆಗೆ ಕಾಂಗ್ರೆಸ್ ಈಗಲೇ ತಾಲೀಮು ಆರಂಭಿಸಿದ್ದು, ಯಾರಿಗೆ ಟಿಕೆಟ್ ನೀಡುತ್ತದೆ ಎಂಬುದು ಕುತೂಹಲ ಕೆರಳಿಸಿದೆ.



