ಯಲಹಂಕ: ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿ ಕಿತ್ತನಹಳ್ಳಿ ಗ್ರಾಮ ಪಂಚಾಯಿತಿ ವಿಶೇಷ ಗ್ರಾಮ ಸಭೆ ಯಂದಕ್ಕೆ ಸಾಕ್ಷಿಯಾಗಿತ್ತು.ಅಂಗವಿಕಲರು ಮತ್ತು ವಿಶೇಷ ಚೇತನರ ಕುಂದುಕೊರತೆಗಳನ್ನು ಆಲಿಸಲು ವೇದಿಕೆ ಕಲ್ಪಿಸಿದ್ದು ಶಾಲಾ ಮಕ್ಕಳನ್ನು ಸೇರಿಸಿಕೊಂಡು ವಿಶೇಷ ಗ್ರಾಮ ಸಭೆ ಆಯೋಜಿಸಿದ್ದರು.
ಸಭೆಯಲ್ಲಿ ಮಕ್ಕಳಿಗೆ ಶಿಕ್ಷಣದ ಅರಿವು ಮೂಡಿಸಿ ಕಡ್ಡಾಯ ಶಿಕ್ಷಣಕ್ಕೆ ಒತ್ತು ನೀಡುವಂತೆ ಮನವರಿಕೆ ಮಾಡಿಕೊಡಲಾಯಿತು ಹಾಗೂ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಪಡೆದುಕೊಳ್ಳಲುಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಿತ್ತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಶಾಂತಮ್ಮ.ಉಪಾಧ್ಯಕ್ಷರಾದ ಕೆಂಗನಹಳ್ಳಿ ರಮೇಶ್, ಮಾಜಿ ಅಧ್ಯಕ್ಷರಾದ ನರಸೇಗೌಡ, ರವಿ ಗೌಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಭದ್ರಯ್ಯ ಸೇರಿದಂತೆ ಹಲವು ಹಲವು ಗಣ್ಯರು ಗ್ರಾಮಸ್ಥರು ಭಾಗವಹಿಸಿದ್ದರು.