ಬೆಂಗಳೂರು: ಭಾರತದ ಅತ್ಯಂತ ದೊಡ್ಡ ಸಂಗೀತ ಶಿಕ್ಷಣದ ಪ್ಲಾಟ್ ಫಾರಂ ಮ್ಯೂಜಿಗಲ್ ಬೆಂಗಳೂರಿನ ಕಾಡುಗೋಡಿಯಲ್ಲಿ ತನ್ನ 11ನೇ ಅತ್ಯಾಧುನಿಕ ಮ್ಯೂಸಿಕ್ ಅಕಾಡೆಮಿ ಪ್ರಾರಂಭಿಸಿದೆ. ಈ ಅಕಾಡೆಮಿಯು 2300 ಚದರ ಅಡಿ ವಿಸ್ತೀರ್ಣ ಹೊಂದಿದೆ ಮತ್ತು ಗಾಯನ ಮತ್ತು ಇನ್ಸ್ ಟ್ರುಮೆಂಟಲ್ ಸಂಗೀತ ಕಲಿಯಲು ಪೂರಕ ವಾತಾವರಣ ಹೊಂದಿದೆ.
ಖ್ಯಾತ ಗಾಯಕ ಮತ್ತು ಸಂಗೀತಗಾರ ಶ್ರೀ ಲಿಂಗಂ ಅನಿಲ್ ಕುಮಾರ್ ಹಾಗೂ ಆಲ್ ಜಲೀಲ್ ಎಕ್ಸ್ ಪೋರ್ಟ್ಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕ ಪಾಲುದಾರರಾದ ಡಾ.ಸೌಮ್ಯ ರಮೇಶ್ ಅವರು ಮುಖ್ಯ ಅತಿಥಿಯಾಗಿದ್ದರು ಮತ್ತು ಡಿಜಿ ಹಾಸ್ಪಿಟಲ್ ನಿರ್ದೇಶಕ ಮತ್ತು ಮ್ಯೂಜಿಗಲ್ ಸಂಸ್ಥಾಪಕ ಡಾ.ಲಕ್ಷ್ಮಿನಾರಾಯಣ ಯೆಲೂರಿ ಉಪಸ್ಥಿತರಿದ್ದರು.
500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಹಲವು ಬ್ಯಾಚ್ ಗಳನ್ನು ಹೊಂದಿರುವ ಕಾಡುಗೋಡಿಯ ಮ್ಯೂಸಿಕ್ ಅಕಾಡೆಮಿಯು ಪಿಯಾನೊ, ಕೀಬೋರ್ಡ್, ಗಿಟಾರ್, ಡ್ರಮ್ಸ್, ಕರ್ನಾಟಕ ಸಂಗೀತ, ಹಿಂದೂಸ್ಥಾನಿ, ಪಾಶ್ಚಿಮಾತ್ಯ, ವಯೊಲಿನ್ ಮತ್ತು ಉಕುಲೆಲೆಯಲ್ಲಿ ಪಾಠಗಳನ್ನು ನೀಡುತ್ತದೆ. ಉದ್ಘಾಟನಾ ತಿಂಗಳಲ್ಲಿ ಮ್ಯೂಜಿಗಲ್ ಎಲ್ಲರಿಗೂ 1 ತಿಂಗಳು ಉಚಿತ ಸಂಗೀತ ಶಿಕ್ಷಣ ನೀಡುತ್ತದೆ.
ಮ್ಯೂಜಿಗಲ್ ನ ಕಾಡುಗೋಡಿ ಅಕಾಡೆಮಿ ಪ್ರಾರಂಭ ಕುರಿತು ಸಂಸ್ಥಾಪಕ ಡಾ.ಲಕ್ಷ್ಮಿನಾರಾಯಣ ಯೆಲೂರಿ, ಮ್ಯೂಜಿಗಲ್ ಅಕಾಡೆಮಿಯು ಸಂಗೀತ ಶಿಕ್ಷಣವನ್ನು ಅತ್ಯಾಧುನಿಕ ಕಲಿಕಾ ಕೇಂದ್ರದ ಮೂಲಕ ಪ್ರಜಾಸತ್ತೀಯಗೊಳಿಸುವ ಉದ್ದೇಶ ಹೊಂದಿದೆ. ಇದು ಸಂಗೀತದಲ್ಲಿ ಅತ್ಯುತ್ತಮ ಕಲಿಕೆ ಮತ್ತು ಬೋಧನೆಯ ಅನುಭವ ನೀಡುತ್ತದೆ. ಇದು ಪರಿಣಿತ ಶಿಕ್ಷಕರಿಂದ ಭಾರತೀಯ ಶಾಸ್ತ್ರೀಯ ಮತ್ತು ಪಾಶ್ಚಿಮಾತ್ಯ ಸಂಗೀತದಲ್ಲಿ ಕಲಿಕೆ ಮತ್ತು ಬೋಧನೆ ನೀಡುತ್ತದೆ. ಇದರೊಂದಿಗೆ ರಚನಾತ್ಮಕ ಪಠ್ಯಕ್ರಮ, ನಿಯಮಿತ ಮೌಲ್ಯಮಾಪನ, ಪ್ರಮಾಣೀಕರಣ, ಅನುಕೂಲಕರ ಶುಲ್ಕ ಪಾವತಿ, ತರಬೇತಿ ಪಡೆದ ಶಿಕ್ಷಕರು ಮತ್ತು ಸುಲಭ ಲಭ್ಯತೆ ಇದರ ವಿಶೇಷತೆಗಳಾಗಿವೆ ಎಂದರು.
ಭಾರತ, ಯು.ಎಸ್.ಎ., ಯು.ಕೆ., ಆಸ್ಟ್ರೇಲಿಯಾ ಮತ್ತು ಯು.ಎ.ಇ.ಗಳಲ್ಲಿ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ 400+ ತರಬೇತಿ ಪಡೆದ ಸಂಗೀತ ಶಿಕ್ಷಕರನ್ನು ಹೊಂದಿದ್ದು 40,000ಕ್ಕೂ ಹೆಚ್ಚು ತರಗತಿಗಳನ್ನು ಯಶಸ್ವಿಯಾಗಿ ಪೂರೈಸಿರುವ ಮ್ಯೂಜಿಗಲ್ ವಿದ್ಯಾರ್ಥಿಗಳಿಗೆ ಅವರ ಸಂಗೀತದ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ನೆರವಾಗುತ್ತದೆ.
ಭಾರತದಲ್ಲಿ ಸಾಂಪ್ರದಾಯಿಕ ಸಂಗೀತ ಶಿಕ್ಷಣವು ನರೆಹೊರೆಯ ಸಂಗೀತ ಶಿಕ್ಷಣ ಕೇಂದ್ರಗಳಿಗೆ ಸೀಮಿತವಾಗಿದೆ ಮತ್ತು ಕೆಲವೇ ಪ್ರದೇಶಗಳಿಗೆ ಮೀಸಲಾಗಿದೆ. ಮ್ಯೂಜಿಗಲ್ ಅದನ್ನು ಮೀರಿ ಎಲ್ಲರಿಗೂ ಸಂಗೀತ ಶಿಕ್ಷಣ ದೊರೆಯುವಂತೆ ಮಾಡುತ್ತಿದೆ. ಮ್ಯೂಜಿಗಲ್ ಆನ್ಲೈನ್ ಮತ್ತು ಆಫ್ಲೈನ್ ತರಗತಿಗಳಿಂದ ಮತ್ತು ಪರಿಣಿತ ಶಿಕ್ಷಕರಿಂದ ಸಮಗ್ರವಾದ ಸಂಗೀತ ಶಿಕ್ಷಣ ನೀಡುತ್ತದೆ.
ಕಾಡುಗೋಡಿ ಮ್ಯೂಜಿಗಲ್ ಅಕಾಡೆಮಿಯು 2ನೇ ಮಹಡಿ, ಬಾಟಾ ಶೋರೂಂ ಮೇಲ್ಭಾಗ, ವೈಟ್ ಫೀಲ್ಡ್, ಹೊಸಕೋಟೆ ರಸ್ತೆ, ಕಾಡುಗೋಡಿ ಪೋಸ್ಟ್, ಬೆಂಗಳೂರು, ಕರ್ನಾಟಕ 560067 ಇಲ್ಲಿದೆ.