ದಾವಣಗೆರೆ: ಇತ್ತೀಚೆಗೆ ಶುಕ್ರವಾರ ಚನ್ನಗಿರಿ ತಾಲ್ಲೂಕಿನ ಶಾಂತಿಸಾಗರ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ಜಿಲ್ಲಾ ಘಟಕ ದಾವಣಗೆರೆ ಇವರ ವತಿಯಿಂದ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಿಗೆ ಮತ್ತು ನಾಮನಿರ್ದೇಶಕರಿಗೆ ಹಾಗೂ ತಾಲೂಕು ಅಧ್ಯಕ್ಷರುಗಳಿಗೆ, ಕಾರ್ಯದರ್ಶಿಗಳಿಗೆ, ಪದಾಧಿಕಾರಿಗಳಿಗೆ, ನಿರ್ದೇಶಕರುಗಳಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಹೊನ್ನಾಳಿ ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿ, ಪ್ರಾಥಮಿಕ ಶಾಲಾ ಶಿಕ್ಷಣ ದೇಶದ ಭದ್ರ ಬುನಾದಿ ಆದ್ದರಿಂದ ಪ್ರತಿಯೊಬ್ಬ ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕಾಗಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾಮಪ್ಪ ಡಿ ಮಾತನಾಡಿ ಸಂಘದಿಂದ ಶಿಕ್ಷಕರ ಹಿತರಕ್ಷಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾತನಾಡಿದರು.ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಮಂಜುನಾಥ ಸ್ವಾಮಿ ಎಂ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಕಲಿಕಾ ಬಲವರ್ಧನೆ ಬಗ್ಗೆ ಉಪನ್ಯಾಸ ನೀಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಪಿ ಆರ್, ಜಿಲ್ಲಾ ಸಂಘದ ಖಜಾಂಚಿಯಾದ ಶಿವಲಿಂಗಪ್ಪ ಜೆ.ಆರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು, ಜಿಲ್ಲೆಯ ತಾಲೂಕಿನ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ನಿರ್ದೇಶಕರುಗಳು.. ಮತ್ತು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಚನ್ನಗಿರಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ದಾವಣಗೆರೆ ಉತ್ತರ ವಲಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶೇರ್ ಅಲಿ, ಹರಿಹರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಕ್ಷೇತ್ರ ಸಮನ್ವಯಾಧಿಕಾರಿ, ಹಾಗೂ ಎಲ್ಲಾ ಬಿಇಓ ಮತ್ತು ಬಿ ಆರ್ ಸಿ ಉಪಸ್ಥಿತರಿದ್ದರು.