ದಾವಣಗೆರೆ: ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹಾನಿಕಾರಕ ಚುಚ್ಚುಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ನಗರದ ಎಂಸಿಸಿ `ಬಿ’ ಬ್ಲಾಕ್ನಲ್ಲಿರುವ ಹಾಸ್ಟೆಲ್ನಲ್ಲಿ ನಡೆದಿದೆ.
ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚರ್ಮರೋಗ ವಿಭಾಗದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಮಹಾರಾಷ್ಟçದ ಸಿದ್ದಾರ್ಥ್ ತ್ರಯಂಬಕೆ (೩೦) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ರಾತ್ರಿಯಿಂದ ವಿದ್ಯಾರ್ಥಿ ಕೊಠಡಿಯ ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ಕೊಠಡಿಯ ಬಾಗಿಲು ತೆರೆದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಬಡಾವಣೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕುಟುಂಬಸ್ಥರ ದೂರಿನನ್ವಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



