ಬೆಂಗಳೂರು: ಬಸವನಗುಡಿಯ ಧರ್ಮಸ್ಥಳ ಕಲ್ಯಾಣ ಮಂಟಪದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜದ ಸಮಾವೇಶ, ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಪ್ರಮುಖವಾಗಿ ದೇಶ ರಕ್ಷಣೆಯಲ್ಲಿ ಸೇವೆ ಸಲ್ಲಿಸಿದ ದೈವಜ್ಞ ಬ್ರಾಹ್ಮಣ ಸಮಾಜಕ್ಕೆ ಸೇರಿದ ಸೈನಿಕರಿಗೆ ಅಭಿನಂದನೆ ಸಲ್ಲಿಸಲಾಯಿತು.
ಹೊನ್ನಾವರದ ದೈವಜ್ಞ ಬ್ರಾಹ್ಮಣ ಪೀಠದ ಶ್ರೀ.ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಯವರ ನೇತೃತ್ವದಲ್ಲಿ ಈ ಅದ್ದೂರಿ ಕಾರ್ಯಕ್ರಮ ಜರುಗಿತು.ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಸಿ ರಾಮಮೂರ್ತಿ, ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಮಹೇಶ್ ಶೇಟ್ ಸೇರಿದಂತೆ ಹಲವು ಪ್ರಮುಖರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ, ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಆಗುವ ಮೂಲಕ ದೇಶದ ಧಾರ್ಮಿಕ ಪರಿಸರ ಜಾಗೃತ ಸ್ಥಿತಿ ತಲುಪಿದೆ. ಸಮಾಜದಲ್ಲಿ ಶಾಂತಿ ನೆಮ್ಮದಿ ಸಹಬಾಳ್ವೆಯ ಯುಗ ಆರಂಭವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ದೈವಜ್ಞ ಬ್ರಾಹ್ಮಣ ಸಮಾಜ ಸಾತ್ವಿಕ ಸ್ವಭಾವದ ತ್ಯಾಗಮಯಿ ಜನರಿಂದ ಕೂಡಿದೆ.ನಿರುಪದ್ರವಿ ಸ್ವಭಾವದ ದೈವಜ್ಞ ಬ್ರಾಹ್ಮಣರು ತಮ್ಮ ಶ್ರಮ, ಜ್ಞಾನ, ನಿಷ್ಠೆಯ ಮೂಲಕ ರಾಮ ರಾಜ್ಯ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ರಾಜ್ಯ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸುತ್ತಿರುವ ಮೈಸೂರು ದೈವಜ್ಞ ಬ್ರಾಹ್ಮಣ ಸಮಾಜದ ಮುಖಂಡರಾದ ಮಹೇಶ್ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಮೂಲಕ ತಮ್ಮ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಇದೇ ವೇಳೆ ಸಂಘಟಕರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರನ್ನು ಒತ್ತಾಯಿಸಿದರು.ದೈವಜ್ಞ ಬ್ರಾಹ್ಮಣ ಸಮಾಜದ ಅನೇಕ ನಾಯಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.