ಮೈಸೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದವರ ಪೈಕಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದಲ್ಲಿ ನಿನ್ನೆ ಕಲುಷಿತ ನೀರು ಸೇವಿಸಿದ ಪರಿಣಾಮ ಹಲವರು ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಕನಕರಾಜು(20) ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇಬ್ಬರು ಮಕ್ಕಳು ಮೂವರು ಮಹಿಳೆಯರು ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.ಘಟನೆ ಸಂಭವಿಸಿರುವ ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.