ಬೆಂಗಳೂರು: ನಡು ರಸ್ತೆಯಲ್ಲಿ ಪಾನಮತ್ತ ಕಿಡಿಗೇಡಿಗಳು ಮಹಿಳೆ, ಯುವತಿ ಮೇಲೆ ಹಲ್ಲೆ ನಡೆಸಿರುವ ಘಟನೆ ತಲಘಟ್ಟಪುರ ಠಾಣಾ ವ್ಯಾಪ್ತಿಯ ಆವಲಹಳ್ಳಿಯಲ್ಲಿ ನಡೆದಿದೆ.ಮದ್ಯದ ಅಮಲಿನಲ್ಲಿದ್ದ ಬಾಲಾಜಿ, ಯೋಗಿ ಸೇರಿದಂತೆ ಮೂವರು ಪುಂಡರ ಗ್ಯಾಂಗ್ ನಡು ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆ ಮತ್ತು ಯುವತಿಯನ್ನು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ.
ನೆರೆಹೊರೆಯವರ ಸಹಾಯದಿಂದ ಮಹಿಳೆ, ಯುವತಿ ಪಾರಾಗಿದ್ದು ಆರೋಪಿಗಳ ವಿರುದ್ದ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಹಿಳೆ ಮತ್ತು ಯುವತಿ ತನ್ನ ಮನೆಯ ರಸ್ತೆ ಬದಿ ಮಗ ಮಕ್ಕಳೊಂದಿಗೆ ವಾಲಿ ಬಾಲ್ ಆಟವಾಡುತ್ತಿದ್ದರು. ಈ ವೇಳೆ ಬಂದ ಕಿಡಿಗೇಡಿಗಳು ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ಮಹಿಳೆ ನಿಂದಿಸಿದನ್ನು ಪ್ರಶ್ನಿಸಿದ್ದಕ್ಕೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.
ಮಹಿಳೆ ಮತ್ತು 21 ವರ್ಷದ ಯುವತಿಯ ಕೂದಲು ಹಿಡಿದೆಳೆದು ಹಲ್ಲೆ ನಡೆಸಿರುವ ದೃಶ್ಯಗಳನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ. ನೆರೆಹೊರೆಯವರ ಸಹಾಯದಿಂದ ಯುವತಿ ಮತ್ತು ಮಹಿಳೆ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ದ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 34, 504, 323,354 ಅಡಿ ಎಫ್ಐಆರ್ ದಾಖಲಾಗಿದೆ. ಕೇಸ್ ದಾಖಲಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸ್ತಿದ್ದಾರೆ. ಘಟನೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ರಸ್ತೆ ಬದಿ ಆಟವಾಡುತ್ತಿದ್ದ ಕಾರಣಕ್ಕೆಯೇ ಜಗಳ ನಡೆದಿದೆ ಎನ್ನಲಾಗುತ್ತಿದೆ.