ಬೆಂಗಳೂರು : ಆಡುಗೋಡಿಯ ಎಕೆ ಕಾಲೊನಿಯ ಮನೆಯೊಂದರಲ್ಲಿ ಬಾಡಿಗೆಗಿದ್ದ ಯುವತಿ ಪೂಜಾ ಶವ ಕೊಳೆತ ಸ್ಥಿತಿಯಲ್ಲಿ ನಗ್ನವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.ಜಾರ್ಖಂಡ್ ಮೂಲದ ಪೂಜಾ ಬಾಡಿಗೆಗಿದ್ದ ಎಕೆ ಕಾಲೊನಿಯ ಮನೆಯಿಂದ ದುರ್ವಾಸನೆ ಬರುತ್ತಿತ್ತು. ಈ ಬಗ್ಗೆ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಡುಗೋಡಿ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯ ಬೀಗ ಒಡೆದು ಪರಿಶೀಲನೆ ನಡೆಸಿದಾಗ ಯುವತಿಯ ದೇಹ ಬೆತ್ತಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಥಳದಲ್ಲಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯ ವೇಳೆ, ಪೂಜಾ ವಾಸವಿದ್ದ ಮನೆಯ ಸ್ಥಿತಿಯನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ಇದರಿಂದಾಗಿ, ಪೂಜಾ ತೀವ್ರ ಮಾನಸಿಕ ಖಿನ್ನತೆಗೊಳಗಾಗಿದ್ದ ಅನುಮಾನ ವ್ಯಕ್ತವಾಗಿದೆ.



