ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮನೆಯೊಳಗೆ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯ ಸ್ಪಂದನ (೨೬) ಎನ್ನುವ ಮಹಿಳೆಯ ಶವ ಬೆತ್ತಲೆಯಾಗಿ ಪತ್ತೆಯಾಗಿದೆ. ಕಳೆದ ಎಂಟು ದಿನದ ಹಿಂದೆ ಸ್ಪಂದನ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಎರಡು ದಿನದಿಂದ ಮನೆಯಲ್ಲಿ ಯಾರು ಇಲ್ಲದ್ದನ್ನು ಸ್ಥಳೀಯರು ಗಮನಿಸಿದ್ದಾರೆ.ಅನುಮಾನಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರ ಪರಿಶೀಲನೆ ವೇಳೆ ಮನೆಯಲ್ಲಿ ಸ್ಪಂದನ ಮೃತದೇಹ ಪತ್ತೆಯಾಗಿದೆ. ವತಿಯಿಂದ ದೂರವಾಗಿ ಸ್ಪಂದನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದುಷ್ಕರ್ಮಿಗಳು ಸ್ಪಂದನಾಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಬೇಲೂರು ಪೊಲೀಸ್ಠಾಣೆಯಲ್ಲಿ ಈ ಕುರಿತು ಪ್ರಕರಣದಾಖಲಾಗಿದೆ.



