ಬೆಂಗಳೂರು: ಬಿಡದಿ ಬಳಿ ನಿರ್ಮಿಸಲು ಉದ್ದೇಶಿಸಿರುವ ಟೌನ್ಶಿಪ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಮಾಡಬಾರದು. ಕೂಡಲೇ ಅದನ್ನು ಕೈಬಿಡಬೇಕು ಎಂದು ರಾಜ್ಯ ಬಿಜೆಪಿ ಪಕ್ಷದವರು ಆಗ್ರಹ ಪಡಿಸಿದ್ದಾರೆ. ಯೋಜನೆ ವಿರೋಧಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ಯೋಜನೆಯೂ ಸ್ವಹಿತಯಿಂದ ಕೂಡಿದೆ. ಕೂಡಲೇ ಇದನ್ನು ಕೈಬಿಡಿ ಎಂದು ಆಗ್ರಹಪಡಿಸಿದರು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಈ ಹಿಂದೆ ಲಾಭಿ ಸರ್ಕಾರ ನಡೆಯುತ್ತಿತ್ತು. ಇದೀಗ ರಾಜ್ಯದಲ್ಲಿ ಲ್ಯಾಂಡ್ ಮಾಫಿಯಾ ಸರ್ಕಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಅಣ್ಣತಮ್ಮಂದಿರಿಬ್ಬರಿಗೂ ಫಲವತ್ತಾದ ಭೂಮಿಯೇ ಬೇಕಾಗಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಹಾಗೂ ಅವರ ಸಹೋದರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೈತರ ಫಲವತ್ತಾದ ಭೂಮಿಯನ್ನು ಪಡೆದು ರಿಯಲ್ ಎಸ್ಟೇಟ್ ದಂಧೆ ನಡೆಸಲು ಮುಂದಾಗಿದ್ದಾರೆ ಎಂದು ದೂರಿದರು. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಬಿಡದಿ ಟೌನ್ಶಿಪ್ ಯೋಜನೆ ಇವರಿಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುತ್ತೇವೆ. ಬಿಜೆಪಿ ಈ ಯೋಜನೆಗೆ ಸಂಪೂರ್ಣವಾಗಿ ವಿರೋಧವಾಗಿದೆ ಎಂದು ಹೇಳಿದ ಅವರು, ಇದೊಂದು ರೀತಿಯಲ್ಲಿ ಲ್ಯಾಂಡ್ ಮಾಫಿಯಾ ದಂಧೆಯಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಯೊಬ್ಬ ಮುಖಂಡರು, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ವಿಧಾನಪರಿಷತ್ ವಿಪಕ್ಷನಾಯಕ ಛಲವಾದಿ ನಾರಾಯಣಸ್ವಾಮಿ,
ಟೌನ್ಶಿಪ್ ಯೋಜನೆ ಕೈಬಿಡಿ ಬಿಜೆಪಿ ಪ್ರತಿಭಟನಾಕಾರರಿಂದ ಒಕ್ಕೊರಲ ಆಗ್ರಹ



