ದೇವನಹಳ್ಳಿ : ಬೂತ್ ಮಟ್ಟದ ಕಾರ್ಯಕರ್ತರೇ ಪಕ್ಷದ ಜೀವಾಳ ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಯಶಸ್ವಿಯನ್ನು ಮತದಾರರಿಗೆ ತಿಳಿಸಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾರಾಮಯ್ಯ ಪರ ಮತ ಯಾಚಿಸಬೇಕು, ಪಕ್ಷ ನಿಷ್ಠೆಯಿಂದ ಕೆಲಸ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರುಗಳು ಹೆಚ್ಚಿನ ಶ್ರಮವಹಿಸಬೇಕು ಎಂದು ಲೋಕಸಭಾ ಚುನಾವಣಾ ವೀಕ್ಷಕ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ ತಿಳಿಸಿದರು.
ಅವರು ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಮುಖಂಡರಿಗೆ ಸಲಹೆ ಮತ್ತು ಸೂಚನಾ ಸಭೆಯಲ್ಲಿ ಮಾತನಾಡಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ತೊಲಗಿ ದೇಶದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬರಲಿದೆ, ಮೋದಿ ದೇಶದ ಪ್ರಧಾನಿಯಾದ ಮೇಲೆ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಹೆಚ್ಚಾಗಿದೆ, ಗ್ಯಾಸ್, ಪೆಟ್ರೋಲ್ ಬೆಲೆಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ, ರಾಜ್ಯ ಸರ್ಕಾರ ನೀಡಿರುವ ಗ್ಯಾಟಂಟಿಗಳೆ ಕಾಂಗ್ರೆಸ್ ಗೆಲುವಿಗೆ ಸಹಕಾರಿ, ಜೆಡಿಎಸ್-ಬಿಜೆಪಿಗೆ ಈ ಬಾರಿ ಭಾರಿ ಹಿನ್ನಡೆಯಾಗಲಿದೆ,
ಕಾಂಗ್ರೆಸ್ ಕಾರ್ಯಕರ್ತರಿಗೆ ನವ ಚೈತನ್ಯವನ್ನು ನೀಡಬೇಕು.ಗ್ಯಾರಂಟಿ ಯೋಜನೆಗಳ ಸಮಿತಿಯ ಜಿಲ್ಲಾ ಅಧ್ಯಕ್ಷ ಬಿ.ರಾಜಣ್ಣ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ, ಪಕ್ಷದ ಅಭ್ಯರ್ಥಿ ರಕ್ಷಾರಾಮಯ್ಯ ಪರ ಕೆಲಸ ಮಾಡಿ ಗೆಲ್ಲಿಸಿಕೊಳ್ಳಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ನಮ್ಮ ಕ್ಷೇತ್ರದ ಶಾಸಕರು ಹಾಗೂ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ಪಕ್ಷ ಬಲಗೊಂಡಿದೆ, 65ವರ್ಷಗಳ ಇತಿಹಾಸವನ್ನು ಕಾಂಗ್ರೆಸ್ ಪಕ್ಷ ಹೊಂದಿದೆ, ಜನರ ನಾಡಿಮಿಡಿತವನ್ನು ಅರಿತು ಸಾಕಷ್ಟು ಬದಲಾವಣೆಗಳು ಆಗುತ್ತಿವೆ.
ಬಿಜೆಪಿಯ ಜನವಿರೋಧಿ ನೀತಿಗಳನ್ನು ಜನರಿಗೆ ಮನದಟ್ಟು ಮಾಡಬೇಕು, ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಚೈತನ್ಯ ನೀಡಬೇಕು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವೈಪಲ್ಯಗಳನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು.ವೇಳೆಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ, ಗ್ಯಾರಂಟಿ ಯೋಜನೆಗಳ ಸಮಿತಿಯ ಜಿಲ್ಲಾ ಅಧ್ಯಕ್ಷಬಿ.ರಾಜಣ್ಣ, ಜಿಲ್ಲಾ ಸಮಿತಿ ಸದಸ್ಯ ಬಿದಲೂರು ಮುನಿರಾಜು(ರಾಜಣ್ಣ) ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಹಾಗೂ ಗ್ಯಾರಂಟಿ ಯೋಜನ ಸಮಿತಿ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್.ಗೌಡ, ಲಕ್ಷ್ಮಣಗೌಡ, ಮುದುಗುರ್ಕಿ ನಾರಾಯಣಸ್ವಾಮಿ, ಗೋಪಾಲಕೃಷ್ಣ ಹಾಗೂ ಜಿಲ್ಲಾ ಮುಖಂಡರು ಇದ್ದರು.