ನೆಲಮಂಗಲ: ಜನರ ಮೇಲೆಹುಚ್ಚು ನಾಯಿ ದಾಳಿ ನಡೆಸಿದಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಟಿಬಿ ಬಸ್ ನಿಲ್ದಾಣದ ಬಳಿ ನಡೆದಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.
ಹುಚ್ಚು ನಾಯಿ ದಾಳಿಯಿಂದ ಪರಮೇಶ್, ಚೌಡಪ್ಪ, ಕೃಷ್ಣ, ಚೌಡರೆಡ್ಡಿ, ಮೊಹಮ್ಮದ್, ಕಿಶೋರ್, ರಾಧಾ, ತನ್ವೀರ್ ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಟೌನ್ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು.
ಅಲ್ಲದೆ, ಇನ್ಸ್ಪೆಕ್ಟರ್ ಶಶಿಧರ್ ನೇತೃತ್ವದಲ್ಲಿ ನಾಯಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗಿತ್ತು. ಅಲ್ಲದೆ, ಸ್ಪೆಷಲ್ ಡಾಗ್ ಟೇಮ್ ಆಗಮಿಸುವಷ್ಟರಲ್ಲಿ ಸ್ಥಿಮಿತ ಕಳೆದುಕೊಂಡ ಸಾರ್ವಜನಿಕರು, ನೆಲಮಂಗಲ ಟಿಬಿ ಬಸ್ ನಿಲ್ದಾಣದ ಬಳಿ ಪತ್ತೆಯಾದ ಹುಚ್ಚು ನಾಯಿಯನ್ನು ಹೊಡೆದು ಕೊಂದು ಹಾಕಿದ್ದಾರೆ.