ತಿ.ನರಸೀಪುರ: ಇದೇ 29ರಂದು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯಲಿರುವ “ಜಿಲ್ಲಾ ಜನತಾ ದರ್ಶನ “ ಸಭೆಯ ಹಿನ್ನೆಲೆ ಯಲ್ಲಿ ಸೋಸಲೆ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಾರ್ವಜನಿಕ ಆಹವಾಲು ಅರ್ಜಿಗಳನ್ನು ಸ್ವೀಕರಿಸಲಾಯಿತು.
ತಹಶೀಲ್ದಾರ್ ಟಿ.ಜಿ.ಸುರೇಶ್ ಆಚಾರ್ ಅಧ್ಯಕ್ಷತೆಯಲ್ಲಿ ಸೋಸಲೆ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದು ಎಲ್ಲ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಆಹವಾಲುಗಳನ್ನು ಸ್ವೀಕರಿಸಿದರು.
ನಂತರ ಮಾತನಾಡಿದ ತಹಶೀಲ್ದಾರ್, ಉಸ್ತುವಾರಿ ಸಚಿವರ ನಿರ್ದೇಶನದ ಮೇರೆಗೆಜಿಲ್ಲಾ ಮಟ್ಟದ ಜನತಾ ದರ್ಶನ ಸಭೆಗೆ ಮುನ್ನ ಹೋಬಳಿ ಮಟ್ಟದಲ್ಲಿ ಸಭೆ ನಡೆಸಿ ಆಹವಾಲು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.ಕಳೆದ ಎರಡು ದಿನಗಳಿಂದ ಎಲ್ಲ ಹೋಬಳಿ ಕೇಂದ್ರ
ಗಳಲ್ಲಿ ಸಾಂಕೇತಿಕವಾಗಿ ಅರ್ಜಿ ಸ್ವೀಕರಿಸಲಾಗುತ್ತಿದೆ.
ಅರ್ಜಿ ಸ್ವೀಕಾರಕ್ಕೆ ಇದು ಅಂತಿಮ ದಿನವಲ್ಲ, ನಾಳೆಯಿಂದ ನ.28ರವರೆಗೆ ಎಲ್ಲ ನಾಡಕಛೇರಿ ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸಾರ್ವಜನಿಕ ಆಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರಿಗೆ ಮಾಹಿತಿ ತಿಳಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಮ್ ಟಾಮ್ ಹೊಡೆಸಲು ನಿರ್ಧರಿಸಲಾಗಿದೆ ಎಂದರು
ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣ ಮಾತನಾಡಿ, ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ಯಶಸ್ವಿಗೊಳಿಸುವ ಜವಾಬ್ದಾರಿ ಜನ ಪ್ರತಿನಿಧಿಗಳು, ಸಮಾಜಸೇವಕರು, ಜವಾಬ್ದಾರಿಯುತ ನಾಗರಿಕರು ಮತ್ತು ಅಧಿಕಾರಿ ವೃಂದದ ಮೇಲಿದೆ. ಹಾಗಾಗಿ ಇದೇ 29ರಂದು ನಡೆಯಲಿರುವ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಹೆಚ್ಚು ಜನರು ಭಾಗವಹಿಸಬೇಕು ಮನವಿ ಮಾಡಿದರು.
ಸಂದರ್ಭದಲ್ಲಿ ಸೋಸಲೆ ಗ್ರಾ.ಪಂ. ಅಧ್ಯಕ್ಷೆ ಚಾಂದಿನಿ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಶಾಂತ, ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಕೈಲಾಸಮೂರ್ತಿ, ಬಿಇಒ ಶೋಭ, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಲಿಂಗರಾಜು, ಸೋಸಲೆ ಉಪ ತಹಶೀಲ್ದಾರ್ ಶೋಭಾ, ಪಿಡಬ್ಲ್ಯೂಡಿ ಎಇಇ ಸತೀಶ್ ಚಂದ್ರನ್, ಸರ್ವೇ ಇಲಾಖೆಯ ನಾಗರಾಜು, ನರೇಗಾ ಸಹಾಯಕ ನಿರ್ದೇಶಕ ಶಶಿಕುಮಾರ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಚೇತನ್, ಉಮೇಶ್, ಹಿಂದುಳಿದ ವರ್ಗದ ಅಧಿಕಾರಿ ರಾಜಣ್ಣ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾಸಿನಿ, ಕೃಷಿ ಅಧಿಕಾರಿ ಶಿವರಾಜು, ಪಿಡಿಒಗಳಾದ ಪುಟ್ಟಸ್ವಾಮಿ, ನಿರ್ಮಲ, ಆರಾಧ್ಯಕಂದಾಯ ನಿರೀಕ್ಷಕ ಶ್ಯಾಮ್ ಇತರರು ಹಾಜರಿದ್ದರು.