ಬೆಂಗಳೂರು: ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗ ತೊಡಗಿವೆ. ಬಿಜೆಪಿ ಜೆಡಿಎಸ್ ಪಕ್ಷಗಳು ಆಡಳಿತ ರೂಢ ಕಾಂಗ್ರೆಸ್ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಆರೋಪಮಾಡುತ್ತಿವೆ.
ಇಂದು ಬೆಳಿಗ್ಗೆನಿಂದ ಮುಖ್ಯಮಂತ್ರಿಯವರ ಪುತ್ರ ಅವರು ದೂರವಾಣಿಯಲ್ಲಿ ಮಾತನಾಡಿರುವ ವೀಡಿಯೋ ವೈರಲ್ ಆಗಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರೆ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಆಡಳಿತಾರೂಢ ಪಕ್ಷದ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು ಮತ್ತಿತರ ಮುಖಂಡರು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡತೊಡಗಿವೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ವರ್ಗಾವಣೆ ನಿಂತು ಎಷ್ಟು ದಿನಗಳಾಗಿವೆ. ಎಲ್ಲಿ ನಡೆಯುತ್ತಿದೆವರ್ಗಾವಣೆ ಎಂದು ಪ್ರಶ್ನೆ ಮಾಡಿದ್ದಾರೆ.ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿಯ ಆರ್ ಆಶೋಕ್, ಅಶ್ವತ್ಥ್ನಾರಾಯಣ, ಅರಗ ಜ್ಞಾನೇಂದ್ರ ಎನ್. ರವಿಕುಮಾರ್ ಮತ್ತಿತರರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಒಟ್ಟಾರೆ ಪ್ರತಿಪಕ್ಷ ಆಡಳಿತಾಪಕ್ಷಗಳ ನಡುವಿನ ರಾಜಕೀಯ ಕೆಸರೆರಚಾಟ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ. ಆರೋಪ-ಪ್ರತ್ಯಾರೋಪಆಡಳಿತ ಪ್ರತಿಪಕ್ಷಗಳ ನಡುವೆ ಹೆಚ್ಚುತ್ತಿರುವ ವಾಕ್ಸಮರ ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚಾಗ ತೊಡಗಿವೆ. ಬಿಜೆಪಿ ಜೆಡಿಎಸ್ ಪಕ್ಷಗಳು ಆಡಳಿತ ರೂಢ ಕಾಂಗ್ರೆಸ್ ಮೇಲೆ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಆರೋಪಮಾಡುತ್ತಿವೆ.
ಇಂದು ಬೆಳಿಗ್ಗೆನಿಂದ ಮುಖ್ಯಮಂತ್ರಿಯವರ ಪುತ್ರ ಅವರು ದೂರವಾಣಿಯಲ್ಲಿ ಮಾತನಾಡಿರುವ ವೀಡಿಯೋ ವೈರಲ್ ಆಗಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್, ಬಿಜೆಪಿ ಪಕ್ಷಗಳ ಮುಖಂಡರು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರೆ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಯಾಗಿ ಆಡಳಿತಾರೂಢ ಪಕ್ಷದ ಉಪಮುಖ್ಯಮಂತ್ರಿ ಸೇರಿದಂತೆ ಸಚಿವರು ಮತ್ತಿತರ ಮುಖಂಡರು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡತೊಡಗಿವೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ವರ್ಗಾವಣೆ ನಿಂತು ಎಷ್ಟು ದಿನಗಳಾಗಿವೆ. ಎಲ್ಲಿ ನಡೆಯುತ್ತಿದೆವರ್ಗಾವಣೆ ಎಂದು ಪ್ರಶ್ನೆ ಮಾಡಿದ್ದಾರೆ.ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿಜೆಪಿಯ ಆರ್ ಆಶೋಕ್, ಅಶ್ವತ್ಥ್ನಾರಾಯಣ, ಅರಗ ಜ್ಞಾನೇಂದ್ರ ಎನ್. ರವಿಕುಮಾರ್ ಮತ್ತಿತರರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.ಒಟ್ಟಾರೆ ಪ್ರತಿಪಕ್ಷ ಆಡಳಿತಾಪಕ್ಷಗಳ ನಡುವಿನ ರಾಜಕೀಯ ಕೆಸರೆರಚಾಟ ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದೆ.