ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿ ರೋಡ್ ನಲ್ಲಿ ಯುವತಿಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಹಂತಕ ಚೇತನ್ನನ್ನು ಇದೀಗ ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ವಾಮಂಜೂರು ಪಚ್ಚನಾಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಹಂತಕ ಚೇತನ್, ಮಾರಕಾಸ್ತçದಿಂದ ಕೊಚ್ಚಿ ಹಾಡ ಹಗಲೇ ಯುವತಿ ಲಾವಣ್ಯನನ್ನು ಭೀಕರವಾಗಿ ಕೊಲೆ ಮಾಡಿದ್ದ ಬಂಟ್ವಳ ತಾಲೂಕಿನ ಬಿಸಿ ರೋಡ್ ನಲ್ಲಿ ನಿನ್ನೆ ಈ ಒಂದು ಘಟನೆ ನಡೆದಿತ್ತು ಲಾವಣ್ಯ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದ ಚೇತನ್ ಈ ಒಂದು ರಾಕ್ಷಸಿಯ ಕೃತ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಲಾವಣ್ಯ ಕೊಂದು ಆಲ್ಟೋ ಕಾರಿನ ಸಮೇತ ಚೇತನ್ ಪರಾರಿಯಾಗಿದ್ದ.



