ಬೆಂಗಳೂರು: ಬೆಂಗಳೂರಿನ ಲುಲು ಮಾಲ್ನಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಆಧರಿಸಿ ಪೊಲೀಸರು ಆ ವ್ಯಕ್ತಿಯ ಗುರುತು ಪತ್ತೆ ಹಚ್ಚಲಾಗಿದ್ದು ಆತನನ್ನು ಬಂಧಿಸಲಾಗಿದೆ.
ಮೊನ್ನೇ ಲುಲು ಮಾಲ್ನಲ್ಲಿ ಯುವತಿಗೆ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಸಹ್ಯವಾಗಿ ವರ್ತಿಸಿದ್ದ ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಎಂದು ಗುರುತು ಪತ್ತೆಯಾಗಿದೆ. ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದನು.
ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತನಾಗಿದ್ದಾನೆ ಎಂದು ತಿಳಿದುಬಂದಿದೆ.
ಕಳೆದ ಎಂಟು ತಿಂಗಳ ಹಿಂದೆ ನಿವೃತ್ತನಾಗಿದ್ದ ಅಶ್ವಥ್ ನಾರಾಯಣ್. ಮಾಗಡಿ ರೋಡ್ ಪೊಲೀಸರು ಆರೋಪಿ ಪತ್ತೆಗೆ ಹುಡುಕಾಟ ಮುಂದುವರೆಸಿದ್ದರು.ಮೂರು ದಿನಗಳ ಹಿಂದೆ ಲುಲು ಮಾಲ್ನಲ್ಲಿ ಯುವತಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಸಹ್ಯವಾಗಿ ಆಕೆಯ ದೇಹವನ್ನು ಮುಟ್ಟಿದ್ದ.
ಇದನ್ನು ಯಶವಂತ್ ಎನ್ನುವಾತ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಈ ವಿಡಿಯೋ ಆಧಾರದ ಮೇಲೆ ಲುಲು ಮಾಲ್ ಆಡಳಿತ ಮಂಡಲಿ ಮಾಗಡಿ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿತ್ತು.ಈ ದೂರಿನ ಆಧಾರದ ಮೇಲೆ ಪೊಲೀಸರು, ಕಾರ್ಯಚರಣೆ ನಡೆಸಿ ಆರೋಪಿಯ ಗುರುತು ಪತ್ತೆ ಮಾಡಿದ್ದರು. ಆದರೆ, ಆರೋಪಿ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮನಗೆ ಬೀಗ ಹಾಕಿ ಪರಾರಿಯಾಗಿದ್ದನು.