ಬೆಂಗಳೂರು: ಸ್ಟಾರ್ಟ್-ಅಪ್ ಉದ್ಯೋಗಿಯೊಬ್ಬರು ತಮ್ಮ ಚಾಕೊಲೇಟ್ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂ ದಾಗಿ ನಗರದಾದ್ಯಂತ ಮೆಟ್ರೋ
ವಾಶ್ರೂಮ್ಗಳಲ್ಲಿ ಕ್ಯೂಆರ್ಕೋಡ್ಗಳನ್ನು ಅಂಟಿಸಿರುತ್ತಿರು ವಾಗ ಸಿಕ್ಕಿಬಿದ್ದಿದ್ದಾನೆ.
ಕಳೆದ ಏಪ್ರಿಲ್ 23 ರಂದು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಅಂಟಿಸುವಾಗ ಸಿಕ್ಕಿಬಿದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅನುಮತಿಯಿಲ್ಲದೆ ಕೃತ್ಯವೆಸಗಿದ್ದ ಸ್ಟಾರ್ಟ್-ಅಪ್ ಉದ್ಯೋಗಿ ಅರುಣ್ ಎಂಬುವವರ ವಿರುದ್ಧ ಮೆಟ್ರೋ ಭದ್ರತಾ ಸಿಬ್ಬಂದಿ ಪ್ರಕರಣ ದಾಖಲಿಸಿದ್ದು, ಸದ್ಯ ಬೆಂಗಳೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ನಗರದಾದ್ಯಂತ ಇರುವ ನಮ್ಮ ಮೆಟ್ರೋ ನಿಲ್ದಾಣಗಳ ವಾಶ್ ರೂಂನಲ್ಲಿ ಅರುಣ್ ಕ್ಯೂಆರ್ ಕೋಡ್ ಸ್ಟಿಕ್ಕರ್ಗಳನ್ನು ಅಂಟಿಸಿದ್ದಾರೆ. “ನಿಮ್ಮ ಪ್ರೀತಿಪಾತ್ರರನ್ನು ಡಿಜಿರ್ನೊಂದಿಗೆ ಆಕರ್ಷಿಸಿ. ನನ್ನನ್ನು ಸ್ಕ್ಯಾನ್ ಮಾಡಿ” ಎಂದು ಟ್ಯಾಗ್ಲೈನ್ ನೀಡಲಾಗಿದೆ.