ಬೆಂಗಳೂರು: ನಂಬರ್ ಪ್ಲೇಟ್ ಮರೆ ಮುಚ್ಚಿಕೊಂಡು ದ್ವಿಚಕ್ರವಾಹನ ಚಾಲನೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಸಾರ್ವಜನಿಕರು ಟ್ವಿಟ್ಟರ್ ಮೂಲಕ ಸಂಚಾರ ಪೊಲೀಸ್ ಕಂಟ್ರೋಲ್ ರೂಮ್ಗೆ ತನ್ನ ಮೊಬೈಲ್ ನಲ್ಲಿ ಫೋಟೋ ತೆಗೆದು ರವಾನಿಸಿದ ಹಿನ್ನೆಲೆಯಲ್ಲಿ ವೈಟ್ ಫೀಲ್ಡ್ ಸಂಚಾರ ಪೊಲೀಸರು ಚಂದ್ರಶೇಖರ್ ಎಂಬುವರನ್ನು ಪತ್ತೆ ಮಾಡಿ ಬಂಧಿಸಿರುತ್ತಾರೆ.
ವೈಟ್ಫೀಲ್ಡ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿ ಮುಖ್ಯರಸ್ತೆಯಲ್ಲಿ ಮೊನ್ನೆ ವಾಹನ ಚಲಾಯಿಸುತ್ತಿದ್ದನ್ನು ಸಾರ್ವಜನಿಕರು ಗಮನಿಸಿ ದೂರು ದಾಖಲಿಸಿದ್ದರು.
ಈ ಸಂಬಂಧ ವೈಟ್ಫೀಲ್ಡ್ ಸಂಚಾರ ಪೊಲೀಸರು ಮುಂದಿನ ಕ್ರಮಕ್ಕಾಗಿ ಚಂದ್ರಶೇಖರ್ ಮತ್ತು ಗಾಡಿಯನ್ನು ಬಂಧಿಸಿ ವೈಟ್ ಫೀಲ್ಡ್ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಸ್ಟೇಷನ್ನಲ್ಲಿ ಎಫ್ ಐ ಆರ್ ದಾಖಲಿಸಿರುತ್ತಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.