ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ನಿನ್ನ ದೇಹದ ನರ ಕಟ್ ಮಾಡುತ್ತೇನೆ ಎಂದು ಖಡ್ಗ ಹಿಡಿದು ಕೊಲೆ ಬೆದರಿಕೆ ಹಾಕಿದ ಆರೋಪಿಯ ಹೆಡಮುರಿಯನ್ನು ಕಟ್ಟು ಹಾಕುವುದರಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಯಾದಗಿರಿ ಜಿಲ್ಲೆ ರಂಗಪೇಟೆ ನಿವಾಸಿ ರಸೂಲ್ ನನ್ನು ಹೈದ್ರಬಾದ್ನಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ. ರಸೂಲ್ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ.
ಈ ಆರೋಪದ ಮೇಲೆ ಆತನ ವಿರುದ್ಧ ಐಪಿಸಿ ಸೆಕ್ಷನ್ 505(1) (ಬಿ), 25(1)(ಬಿ) ಹಾಗೂ ಆಮ್ರ್ಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿತ್ತು.ಸದ್ಯ ಆತನನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.