ಬೆಂಗಳೂರು: ನಾಳೆ ತೈಲ ದರ ಏರಿಕೆ ವಿರೋಧಿಸಿ ವಿಪಕ್ಷಗಳವರು ಪ್ರತಿಭಟನೆ ಮಾಡುತ್ತಿದ್ದು ಈ ಸಂದರ್ಭದಲ್ಲಿ ಜನರಿಗೆ ತೊಂದರೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ಪ್ರತಿಭಟನೆ ಮಾಡುವುದು ಅವರ ಹಕ್ಕು, ಪ್ರತಿಭಟನೆಗೆ ಸಂಬಂಧಪಟ್ಟವರಿಂದ ಅನುಮತಿ ಪಡೆದು ಪ್ರತಿಭಟನೆ ನಡೆಸಲಿ. ಪ್ರತಿಭಟನೆ ವೇಳೆ ಜನರಿಗೆ ತೊಂದರೆಯಾದರೆ ಲಾಠಿ ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.ತೈಲಬೆಲೆ ಏರಿಕೆ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಾಹನಗಳವರು ಪೆಟ್ರೋಲ್ ಡೀಸೆಲ್ ಹಾಕಿಸಿಕೊಳ್ಳುತ್ತಿದ್ದಾರೆ.
ಹೊರ ರಾಜ್ಯದವರು ಸಹ ಬಂದು ನಮ್ಮಲ್ಲಿ ತೈಲ ತುಂಬಿಸಿಕೊಳ್ಳುತ್ತಿದ್ದಾರೆ ಎಂದಿರುವ ಅವರು,ನೀರು ಮತ್ತು ಬಸ್ ಪ್ರಯಾಣದರ ಏರಿಕೆ ಸಂಬಂಧ ಆಯಾ ಇಲಾಖೆಗಳು ನಿರ್ಧಾರ ಕೈಗೊಳ್ಳುತ್ತವೆ ಎಂದು ಹೇಳಿದ್ದಾರೆ.ನಾಳೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಕ್ರಮ ವಿರೋಧಿಸಿ ಬಿಜೆಪಿ ವತಿಯಿಂದ ರಸ್ತ ತಡೆ ಚಲುವಳಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪರಮೇಶ್ವರ್ ಮೇಲಿನಂತೆ ಪ್ರತಿಕ್ರಿಯ ವ್ಯಕ್ತಪಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಎಸ್ಪಿಪಿ ಅವರನ್ನು ಬದಲಾಯಿಸುತ್ತದೆ ಎಂಬ ವದಂತಿಗಳಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಅವರು, ಈ ಬಗ್ಗೆ ಸರ್ಕಾರದ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಬದಲಾಯಿಸುವುದಾದರೆ ಮುಖ್ಯಮಂತ್ರಿ ಹಾಗೂ ತಾವು ಕಾನೂನು ರೀತಿಯಲ್ಲಿ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.ದರ್ಶನ್ ಪ್ರಕರಣದಲ್ಲಿ ಯಾವುದೇ ಮುಲಾಜಿಗೆ, ಒತ್ತಡಕ್ಕೆ ಮಣಿಯದೆ ತನಿಖೆ ನಡೆಯುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.