ಬೆಂಗಳೂರು : ಆರೋಗ್ಯವಾಗಿ ಬದುಕಿರುವಾಗಲೇ `ಸತ್ತಿದ್ದಾರೆ’ ಎಂದು ಸುಳ್ಳು ಪೋಸ್ಟ್ ಹಾಕಿ ವಿಕೃತ ಆನಂದ ಪಟ್ಟವರ ವಿರುದ್ಧ ಹಿರಿಯ ನಟ ದೊಡ್ಡಣ್ಣ ಅವರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ನಟ ದೊಡ್ಡಣ್ಣ ಅವರು ದೂರು ನೀಡಿರುವುದರಿಂದ ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು ವೀವ್ಸ್ಗಾಗಿ ಇಂತಹ ಕೆಟ್ಟ ಕೆಲಸ ಮಾಡುತ್ತಿದ್ದ ಕಿಡಿಗೇಡಿಗಳಿಗೆ ಪೊಲೀಸ್ ಭಯ ಆರಂಭಗೊAಡಿದೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದ `ಪಬ್ಲಿಕ್ ಫ್ರೆಂಡ್’ ಎಂಬ ಖಾತೆಯಲ್ಲಿ ನಟ ದೊಡ್ಡಣ್ಣ ಅವರು ಇನ್ನಿಲ್ಲ ಎಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗಿತ್ತು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ದೊಡ್ಡಣ್ಣ ಅವರ ಅಭಿಮಾನಿಗಳು ಹಾಗೂ ಚಿತ್ರರಂಗದ ಆಪ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಇದಾದ ಬೆನ್ನಲ್ಲೇ ಸ್ವತಃ ದೊಡ್ಡಣ್ಣ ಅವರೇ ಮಾಧ್ಯಮಗಳ ಮುಂದೆ ಬಂದು, `ನಾನು ಚೆನ್ನಾಗಿದ್ದೇನೆ, ಆರೋಗ್ಯವಾಗಿದ್ದೇನೆ, ದಯವಿಟ್ಟು ಸುಳ್ಳು ಸುದ್ದಿ ನಂಬಬೇಡಿ’ ಎಂದು ಸ್ಪಷ್ಟನೆ ನೀಡಬೇಕಾಯಿತು.
ಸುಳ್ಳು ಪೋಸ್ಟ್ ಹಾಕಿದ್ದವರ ವಿರುದ್ಧ ನಟ ದೊಡ್ಡಣ್ಣ ದೂರು ದಾಖಲು



