ಬೆಂಗಳೂರು: ಕಲ್ಟ್’ ಸಿನಿಮಾದ ಈವೆಂಟ್ ಇತ್ತೀಚೆಗೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ನಡೆದಿತ್ತು. ಕೋಟೆ ವೃತ್ತದ ಬಳಿ ದಾರಿಗೆ ಅಡ್ಡಲಾಗಿ ಫ್ಲೆಕ್ಸ್ಗಳನ್ನು ಹಾಕಲಾಗಿತ್ತು. ಇದರಿಂದ ಸಂಚಾರಕ್ಕೆ ಅಡ್ಡಿ ಆಗಿತ್ತು. ಆ ಬಳಿಕ ನಗರಸಭೆಗೆ ದೂರು ಬಂದಿದ್ದರಿAದ ಅದನ್ನು ತೆಗೆದು ಹಾಕಲಾಗಿತ್ತು. ಈ ಸಂಬAಧ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕರೆ ಮಾಡಿ ಅಶ್ಲೀಲ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಆ ಪ್ರಕರಣ ದೊಡ್ಡ ಸದ್ದು ಮಾಡಿತ್ತು. ಈ ಎಲ್ಲಾ ಘಟನೆ ಬಗ್ಗೆ ಝೈದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
`ನನ್ನ ಅಭಿಮಾನಿಗಳ ಪರವಾಗಿ ಕ್ಷಮೆ ಕೇಳುತ್ತೇನೆ. ಈ ಘಟನೆ ಬಗ್ಗೆ ನನಗೆ ತಿಳಿದಿರಲಿಲ್ಲ. ಆ ಘಟನೆ ನಡೆಯಬಾರದಿತ್ತು’ ಎಂದು ಅವರು ಹೇಳಿದ್ದಾರೆ.
ನಗರಸಭೆ ಆಯುಕ್ತೆಗೆ ನಟ ಝೈದ್ ಕ್ಷಮೆಯಾಚನೆ



