ದೆಹಲಿ: ಮುಂಗಾರು ಅಧಿವೇಶನ ಆರಂಭವಾಗುತ್ತಿದ್ದಂತೆ ಲೋಕಸಭೆಯಲ್ಲಿಂದು ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ ಪರಿಣಾಮ ಕಲಾಪವನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು. ಇಂದು ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದAತೆ ವಿಪಕ್ಷಗಳ ಸದಸ್ಯರು ಅಯೋದ್ಯೆಯ ರಾಮಮಂದಿರ ಹುಂಡಿ ಕಳ್ಳತನ ಹಾಗೂ ನೀಟ್ ಪರೀಕ್ಷೆ ಯುಜಿಸಿ ಪತ್ರಿಕೆ ಸೋರಿಕೆ ಪ್ರಕರಣವನ್ನು ಪ್ರಸ್ತಾಪಿಸಿ ಚರ್ಚೆಗೆ ಪಟ್ಟುಹಿಡಿದವು. ಈ ಸಂದರ್ಭದಲ್ಲಿ ಪ್ರತಿಪಕ್ಷಗಳ ಆಗ್ರಹ ಹೆಚ್ಚಾಗುತ್ತಿದ್ದಂತೆ ಪರಿಸ್ಥಿತಿಯನ್ನು ಅವಲೋಕಿಸಿದ ಸಭಾಧ್ಯಕ್ಷ ಪೀಠದಲ್ಲಿದ್ದ ಓಂಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 12ಗಂಟೆಗೆ ಮುಂದೂಡಿದರು.
ಈಗಾಗಲೇ ನಿನ್ನೆ ಇಂದು ಸಭೆ ನಡೆಸಿದ್ದ ಪ್ರತಿಪಕ್ಷಗಳು ಮುಂಗಾರು ಅಧಿವೇಶನ ಸಂದರ್ಭದಲ್ಲಿ ಆಡಳಿತ ರೂಢ ಪಕ್ಷದ ವೈಫಲ್ಯವನ್ನು ವಿರೋಧಿಸಿ ತಮ್ಮ ಪ್ರತಿರೋಧ ಒಡ್ಡಲು ಸಜ್ಜಾಗಿವೆ. ಇಂದು ಬೆಳಿಗ್ಗೆ ಕಲಾಪ ಆರಂಭವಾಗುವುದಕ್ಕೂ ಮುನ್ನ ಸಂಸತ್ ಭವನದ ಪ್ರವೇಶ ದ್ವಾರದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ವೇಳೆ ದೇಶದ ಭದ್ರತೆ, ಖಾಸಗಿ ಬಾಹ್ಯಾಕಾಶ ವಲಯದ ಯಶಸ್ಸು ಮತ್ತು ಜಾಗತಿಕ ಸವಾಲುಗಳ ನಡುವೆಯೂ ಭಾರತ ಸಾಧಿಸಿರುವ ಆರ್ಥಿಕ ಪ್ರಗತಿಯನ್ನು ಪ್ರಧಾನಿ ಮುಕ್ತಕಂಠದಿAದ ಶ್ಲಾಘಿಸಿದರು. ಇಡೀ ಜಗತ್ತು ಹಾಗೂ ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿ ಯುದ್ಧ ಮತ್ತು ಸಂಘರ್ಷದ ಪರಿಸ್ಥಿತಿ ಎದುರಾಗಿದ್ದರೂ ಭಾರತದ ಆರ್ಥಿಕತೆ ಶಕ್ತಿಯುತವಾಗಿ ಬೆಳೆದಿದೆ ಎಂದು ಪ್ರಧಾನಿ ಹೇಳಿದರು.ಜಾಗತಿಕ ಮಟ್ಟದಲ್ಲಿ ತೀವ್ರ ಸವಾಲುಗಳು ಮತ್ತು ಪಶ್ಚಿಮ ಏಷ್ಯಾದ ಸಂಘರ್ಷದಿAದ ಬಿಕ್ಕಟ್ಟು ಸೃಷ್ಟಿಯಾಗಿದ್ದರೂ ಸಹ, ಭಾರತವು ಶೇಕಡಾ 7.7 ರಷ್ಟು ಭಾರಿ ಆರ್ಥಿಕ ಬೆಳವಣಿಗೆಯನ್ನು ದಾಖಲಿಸಿದೆ. ಇದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ವಿಷಯ ಎಂದು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದರು.ಭಾರತದ ಖಾಸಗಿ ಬಾಹ್ಯಾಕಾಶ ಸಂಸ್ಥೆ `ಸ್ಕೈರೂಟ್’ ಇತ್ತೀಚೆಗೆ ಸಾಧಿಸಿದ ರಾಕೆಟ್ ಉಡಾವಣೆಯ ಐತಿಹಾಸಿಕ ಯಶಸ್ಸನ್ನು ಪ್ರಧಾನಿ ವಿಶದವಾಗಿ ಸ್ಮರಿಸಿದರು.ಕಳೆದ ವರ್ಷ ನಮ್ಮ ಭಾರತೀಯ ನಾಗರಿಕನೊಬ್ಬ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಈಗ ನಮ್ಮ ಯುವಕರು ಬಾಹ್ಯಾಕಾಶಕ್ಕೆ ಹೊಸ ಖಾಸಗಿ ಪ್ರಯಾಣ ಆರಂಭಿಸಿದ್ದಾರೆ.ಭಾರತದ ಯುವಕರ ಸಾಮರ್ಥ್ಯ ಮತ್ತು ಆಕಾಂಕ್ಷೆಗಳು ಬಾಹ್ಯಾಕಾಶದಷ್ಟೇ ಅಪರಿಮಿತವಾಗಿವೆ ಎಂದರು. ಸಂಸತ್ತಿನ ಕಲಾಪಗಳ ಕುರಿತು ಮಾತನಾಡಿದ ಪ್ರಧಾನಿ, ಅಧಿವೇಶನವು ಅತ್ಯಂತ ಫಲಪ್ರದವಾಗಿ ಮತ್ತು ಪ್ರಗತಿದಾಯಕವಾಗಿ ನಡೆಯಲಿ ಎಂದು ಆಶಿಸಿದರು.ಒಟ್ಟಾರೆ ಈ ಬಾರಿಯ ಮುಂಗಾರು ಅಧಿವೇಶನ ಪ್ರತಿಪಕ್ಷಗಳ ಪಾಲಿಗೆ ಹೆಚ್ಚಾಗಿ ಆಡಳಿತ ರೂಢ ಪಕ್ಷವನ್ನು ಮಣಿಸಲು ಸಾಕಷ್ಟು ಅಸ್ತ್ರಗಳು ಸಿಕ್ಕಂತಾಗಿವೆ. ರಾಜ್ಯಸಭೆಯಲ್ಲೂ ಇದೇ ಪರಿಸ್ಥಿತಿ ಮುಂದುವರಿದು ಕಲಾಪವನ್ನು 12ಗಂಟೆವರೆಗೂ ಮುಂದೂಡಲಾಯಿತು.
ಅಧಿವೇಶನ ಆರಂಭದಲ್ಲೇ ಗದ್ದಲ ಲೋಕಸಭೆ ಕಲಾಪ ಮುಂದೂಡಿಕೆ



