ಬೆಂಗಳೂರು: ಇದುವರೆಗೂ ನ್ಯಾಯಾಂಗ ಬಂಧನದಲ್ಲಿದ್ದ ಕರ್ನಾಟಕ ರಕ್ಷಣ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಇಂದು ಜೈಲಿನಿಂದ ಬಿಡುಗಡೆ ಗೊಂಡರಾದರು. ಪುನಃ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಕುಮಾರಸ್ವಾಮಿ ಲೇಔಟ್ ಪೊಲೀಸರು 2017 ರಲ್ಲಿ ಸಾರ್ವಜನಿಕ ಆಸ್ತಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಬಂಧಿಸಿದ್ದಾರೆ.
ಅವರನ್ನು ಇಂದು ನೃಪತುಂಗ ರಸ್ತೆಯಲ್ಲಿರುವ 30ನೇ ಎಸಿ ಎಮ್ ಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. 30ನೇ ಎಸಿಎಂ ಎಂ ನ್ಯಾಯಾಲಯ ನಾರಾಯಣಗೌಡ ರವರು ನ್ಯಾಯಾಲಯಕ್ಕೆ ಹಾಜರಾಗದಿದ್ದ ಪರಿಣಾಮ ಜಾಮೀನು ರಹಿತ ವಾರಂಟ್ ಅನ್ನು ಜಾರಿಗೊಳಿಸಿತ್ತು.
ಇಂದು ಬೆಳಿಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಜಗದೀಶ್ ರವರು ಪರಪ್ಪನ ಅಗ್ರಹಾರ ಜೈಲಿನ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತಿರುತ್ತಾರೆ ಎಂದು ತಿಳಿದುಬಂದಿದೆ.