ನಟಿಯರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುವ ಘಟನೆಗಳು ಒಂದರ ಹಿಂದೆ ಒಂದರAತೆ ಬೆಳಕಿಗೆ ಬರುತ್ತಿವೆ. ಇದೀಗ ಸೀರಿಯಲ್ ನಟಿ ಹಾಗೂ ಬಿಗ್ಬಾಸ್ ಖ್ಯಾತಿಯ ಐಶ್ವರ್ಯಾ ಸಿಂಧೋಗಿ ಕೂಡ ಅಪರಿಚಿತ ವ್ಯಕ್ತಿಯಿಂದ ನಿರಂತರ ಕಿರುಕುಳವಾಗುತ್ತಿದೆ ಎಂದು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕಳೆದ ಎರಡು ತಿಂಗಳಿಂದ ಫೇಕ್ ಅಕೌಂಟ್ಗಳ ಮೂಲಕ ಅವಹೇಳನಕಾರಿ ಕಾಮೆಂಟ್, ಮಾನಹಾನಿಯಾಗುವಂತಹ ಮೆಸೇಜ್ಗಳು ಮತ್ತು ನಿಂದನಾತ್ಮಕ ಪೋಸ್ಟ್ಗಳನ್ನು ಮಾಡಲಾಗುತ್ತಿದೆ ಎಂದು ಐಶ್ವರ್ಯಾ ದೂರಿನಲ್ಲಿ ಆರೋಪಿಸಿದ್ದಾರೆ. ಇದರಿಂದ ತಮ್ಮ ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.ಇದಕ್ಕೂ ಮೊದಲು 2022ರಲ್ಲೂ ಇದೇ ರೀತಿಯ ಕಿರುಕುಳ ಎದುರಿಸಿದ್ದಾಗಿ ಐಶ್ವರ್ಯಾ ಹೇಳಿದ್ದಾರೆ. ಆಗಲೂ ಕರೆ ಮಾಡುವುದು, ಹಿಂಬಾಲಿಸುವುದು ಸೇರಿದಂತೆ ಹಲವು ರೀತಿಯಲ್ಲಿ ತೊಂದರೆ ನೀಡಲಾಗಿತ್ತು. ಆ ಪ್ರಕರಣದಲ್ಲೂ ಸಂಜಯನಗರ ಠಾಣೆಗೆ ದೂರು ದಾಖಲಾಗಿತ್ತು ಎನ್ನಲಾಗಿದೆ.ಈ ಬಾರಿಯೂ ಪರಿಚಯದ ವ್ಯಕ್ತಿಯೇ ಬೇರೆ ಹೆಸರಿನಲ್ಲಿ ಫೇಕ್ ಅಕೌಂಟ್ ತೆರೆದು ಕಿರುಕುಳ ನೀಡುತ್ತಿರುವ ಅನುಮಾನವನ್ನು ನಟಿ ವ್ಯಕ್ತಪಡಿಸಿದ್ದಾರೆ. ದೂರಿನಲ್ಲಿ ಶ್ರೀಮತಿ ಮನ್ನತ್ ನಕುಲ್ ಎಂಬ ಹೆಸರನ್ನೂ ಉಲ್ಲೇಖಿಸಿದ್ದು, ಇದೇ ವ್ಯಕ್ತಿ ಬೇರೆ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುತ್ತಿರುವ ಶಂಕೆ ವ್ಯಕ್ತಪಡಿಸಿದ್ದಾರೆ.ರಮ್ಯಾ, ರುಕ್ಮಿಣಿ ವಸಂತ್ ಸೇರಿದಂತೆ ಹಲವು ನಟಿಯರು ಸೋಷಿಯಲ್ ಮೀಡಿಯಾ ಕಿರುಕುಳದ ಬಗ್ಗೆ ದೂರು ನೀಡಿದ ಘಟನೆಗಳ ನಡುವೆಯೂ ಇಂತಹ ಪ್ರಕರಣಗಳು ಮುಂದುವರಿಯುತ್ತಿರುವುದು ಆತಂಕ ಮೂಡಿಸಿದೆ. ಸದ್ಯ ಸಂಜಯನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



