ಮುಂಬೈ: ಪುಣೆಯ ಬಾರಾಮತಿಯಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ನಿಧನರಾದ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.
ನಿನ್ನೆ ಪುಣೆ ಜಿಲ್ಲೆಯಲ್ಲಿ ಬಾಂಬ್ಬಾರ್ಡಿಯರ್ ಲಿಯರ್ಜೆಟ್ ೪೫ ವಿಮಾನ ಅಪಘಾತಕ್ಕೀಡಾದ ನಂತರ ಅಜಿತ್ ಪವಾರ್ ಮತ್ತು ಇತರ ಐವರು ಸಾವನ್ನಪ್ಪಿದರು.
ಮಹಾರಾಷ್ಟç ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಸುನೇತ್ರಾ ಪವಾರ್ ಮತ್ತು ಪುತ್ರ ಜಯ್ ಅವರು ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಅಂತಿಮ ನಮನ ಸಲ್ಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ನಿತಿನ್ ನಬಿನ್, ಮಹಾರಾಷ್ಟç ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ರಾಜ್ಯ ಸಚಿವ ಸಂಪುಟವು ಅಂತ್ಯಕ್ರಿಯೆಯಲ್ಲಿ ಉಪಸ್ಥಿತರಿದ್ದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ



