ಬೆಂಗಳೂರು: ನೀಟ್ ಅಕ್ರಮ ಸಂಬಂಧ ದೇಶಾದ್ಯಂತ ಪ್ರತಿಭಟನೆಗೆ ಸಿಜೆಪಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆದೆಹಲಿಯ ಆಯಾಕಟ್ಟಿನ ಪ್ರದೇಶದಲ್ಲಿ ಅರೆಸೇನಾ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಿನ್ನೆಯಂತೆ ಇಂದೂ ಸಹ ಜಂಥರ್ ಮಂಥರ್ ಬಳಿ ಪ್ರತಿಭಟನಾಕಾರರನ್ನು ತಡೆಯುವ ಹಿನ್ನೆಲೆಯಲ್ಲಿ 17 ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈಗಾಗಲೇ ನೀಟ್ ಹಗರಣವನ್ನು ಖಂಡಿಸಿ ಸೋನಮ್ ವಾಂಗ್ಚುಕ್ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಮನವೊಲಿಸಲಿ ಹಿಂಪಡೆದಿದ್ದಾರೆ. ಇಂದು ಸಹ ಸಂಸತ್ ಕಲಾಪವು ವಿಪಕ್ಷಗಳ ಗದ್ದಲದಿಂದಾಗಿ ಮುಂದೂಡಲ್ಪಟ್ಟಿದೆ.ಇಂದು ಮಧ್ಯಾಹ್ನ 12.30ಕ್ಕೆ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸಚಿವರು ಸಭೆ ಕರೆದಿದ್ದಾರೆ.ಈ ಸಭೆಯಲ್ಲಿ ಸಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೇಂದ್ರ ಸಚಿವ ಸಂಪುಟಸಭೆಯನ್ನು ಇಂದು ಕರೆಯಲಾಗಿದ್ದು, ಈ ಸಭೆಯಲ್ಲಿ ನೀಟ್ ಅಕ್ರಮದ ವಿರುದ್ಧ ಕಠಿಣ ಕ್ರಮ ಜರುಗಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಸೋಮವಾರದ ವೇಳೆಗೆ ತ್ವರಿತಗತಿಯ ನ್ಯಾಯಾಲಯ ಬಗ್ಗೆಯೂ ಸಹ ಕಾಯ್ದೆ ಜಾರಿಗೆ ತರುವ ಸಂಬAಧ ಅಧಿಕೃತ ಕರುಡುಪ್ರತಿ ಸಿದ್ದವಾಗಿ ಈ ಅಧಿವೇಶನದಲ್ಲಿ ಅದರ ಜಾರಿಗೆತರಲಾಗುವುದು ಎಂದು ತಿಳಿದುಬಂದಿದೆ. ಒಟ್ಟಾರೆ ವಿಪಕ್ಷಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನೀಡುವವರೆಗೂ ತಮ್ಮ ಪಟ್ಟು ಸಡಿಲಿಸದಿರಲು ತೀರ್ಮಾನಿಸಿವೆ.



