ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬAಧಿಸಿದ ಲಿಖಿತ ಪರೀಕ್ಷೆಯು ಆಗಸ್ಟ್ 2ರಂದು ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕ, ಸುಸೂತ್ರ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರೀಕ್ಷೆಯನ್ನು ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ, ಸುಗಮ ಆಸನ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಸಮರ್ಪಕವಾಗಿ ಅಳವಡಿಸಿ ಪರೀಕ್ಷೆಯ ಪ್ರತಿಯೊಂದು ಹಂತವನ್ನು ಮೇಲ್ವಿಚಾರಣೆ ಮಾಡಬೇಕು. ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಬೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಸುತ್ತ ಮುತ್ತ ಭದ್ರತೆ ಹಾಗೂ ಪರೀಕ್ಷೆಯ ಪಾವಿತ್ರ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.ಆಗಸ್ಟ್ 2ರಂದು ಭಾನುವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳು ಬೆಳಗ್ಗೆ 8 ಗಂಟೆಗೆ ಆಯಾ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಿ ಕಡ್ಡಾಯ ಭದ್ರತಾ ತಪಾಸಣೆಗೆ ಒಳಪಟ್ಟ ಬಳಿಕವೇ ತಮ್ಮ ಪರೀಕ್ಷಾ ಕೊಠಡಿಗಳಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಕೆಇಎ ನಿರ್ದೇಶನದಂತೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ಮುನ್ನ ಪ್ರತಿಯೊಬ್ಬ ಅಭ್ಯರ್ಥಿಯನ್ನೂ ಕಟ್ಟುನಿಟ್ಟಾದ ಭದ್ರತಾ ತಪಾಸಣೆಗೆ ಒಳಪಡಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಚೀಟಿಗಳು, ಜಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ಕ್ಯಾಲ್ಕುಲೇಟರ್, ಸ್ಕೇಲ್, ಬರೆಯುವ ಕಾಗದ, ಪೆನ್ ಡ್ರೈವ್, ಮೊಬೈಲ್ ಫೋನ್, ಬ್ಲೂಟೂತ್ ಸಾಧನಗಳು, ಇಯರ್ಫೋನ್, ಮೈಕ್ರೋಫೋನ್, ಕ್ಯಾಮೆರಾ, ಕೈಗಡಿಯಾರ, ಕೈಚೀಲ, ಬೆಲ್ಟ್, ಕ್ಯಾಪ್, ಗಾಗಲ್ಸ್, ಆಹಾರ ಪದಾರ್ಥಗಳು, ನೀರಿನ ಬಾಟಲಿ ಸೇರಿದಂತೆ ಯಾವುದೇ ವಸ್ತುಗಳನ್ನು ತರಲು ಅವಕಾಶ ಇರುವುದಿಲ್ಲ. ಪರೀಕ್ಷೆಗೆ ನಿಗದಿಪಡಿಸಿರುವ ವಸ್ತ್ರಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗಬಾರದು. ಕಿವಿ, ತಲೆ ಹಾಗೂ ಮುಖ ಮುಚ್ಚುವ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶವಿರುವುದಿಲ್ಲ. ಮೂಗುತಿ ಹಾಗೂ ಮಂಗಳಸೂತ್ರವನ್ನು ಹೊರತುಪಡಿಸಿ ಇತರೆ ಯಾವುದೇ ಲೋಹದ ಆಭರಣಗಳನ್ನು ಧರಿಸಬಾರದು. ಶೂ ಧರಿಸಿಕೊಂಡು ಬರುವುದಕ್ಕೂ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
ಧಾರ್ಮಿಕ ಕಾರಣಗಳಿಂದ ವಿಶೇಷ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೆ ಎರಡು ಗಂಟೆಗಳ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕು. ಅಂತಹ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಬಳಿಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುತ್ತದೆ. ಜನಿವಾರ ಹಾಗೂ ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಪರೀಕ್ಷಾ ಸಂಬAಧಿತ ಜವಾಬ್ದಾರಿಗಳನ್ನು ವಿವರಿಸಿ, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ಕೆಇಎ ನಿಯಮಾವಳಿಯಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯಲ್ಲಿ ಪರೀಕ್ಷೆಯನ್ನು ಎದುರಿಸಲು
4,526 ಅಭ್ಯರ್ಥಿಗಳು ನೋಂದಾಯಿಸಿಕೊ
Aಡಿದ್ದು ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ತಮ್ಮ ಪ್ರವೇಶಾನುಮತಿ ಪತ್ರದಲ್ಲಿರುವ ಸೂಚನೆಗಳನ್ನು ತಪ್ಪದೇ ಪಾಲಿಸಿ, ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಸಹಕರಿಸುವಂತೆ ಮನವಿ ಮಾಡಿದ ಜಿಲ್ಲಾಧಿಕಾರಿಗಳು ಎಲ್ಲಾ ಅಭ್ಯರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ,ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಪಂಡರಿನಾಥ್ ಸೇರಿದಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಯಾಗಿರುವ ಮಾರ್ಗ ಅಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾರಿದ್ದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ವಸ್ತ್ರಸಂಹಿತೆಯ ವಿವರ ಹಾಗೂ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ವಿವರವನ್ನು ಈ ಸುದ್ದಿಯೊಂದಿಗೆ ಲಗತ್ತಿಸಿ ಕಳಿಸಿಕೊಡಲಾಗಿದೆ.
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಜಿ. ಪ್ರಭು



