“ಆಲ್ಫಾ #ಮೆನ್ ಲವ್ ವೈಲೆನ್ಸ್#”. ಚಿತ್ರೀಕರಣ ಪೂರ್ಣಗೊಳಿಸಿದೆ. ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಮಂಗಳೂರು ಹಾಗೂ ಮಾಲೂರಿನಲ್ಲಿ ೭೦ಕ್ಕೂ
ಹೆಚ್ಚು ದಿನಗಳ ಚಿತ್ರೀಕರಣ ನಡೆದಿದೆ. ಎಲ್.ಎ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದಕುಮಾರ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ವಿಜಯ್ ನಿರ್ದೇಶಿಸಿದ್ದಾರೆ. ಗಣೇಶ್ ಅಭಿನಯದ ” ಗೀತಾ” ಹಾಗೂ ಧನಂಜಯ್ ನಟನೆಯ “ಗುರುದೇವ ಹೊಯ್ಸಳ” ಚಿತ್ರಗಳ ನಂತರ ವಿಜಯ್ ಅವರು ನಿರ್ದೇಶಿಸಿರುವ ಮೂರನೇ ಚಿತ್ರ “ಆಲ್ಫಾ #ಮೆನ್ ಲವ್ ವೈಲೆನ್ಸ್#”. ಹೇಮಂತ್ ಕುಮಾರ್ ನಾಯಕನಾಗಿ ಅಭಿನಯಿಸುವ ಮೂಲಕ ಕನ್ನಡ ಚ ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ. ” ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ಮಾನಸಿ ಸುಧೀರ್, ಗಿರಿರಾಜ್, ರಾಘು ಶಿವಮೊಗ್ಗ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.
ನಾಗಾರ್ಜುನ ಶರ್ಮ ಅವರು ಬರೆದಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಹೆಸರಾಂತ ಸಂಗೀತ ನಿರ್ದೇಶಕ ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ, ಅಮರ್ ಕಲಾ ನಿರ್ದೆಶನ ಹಾಗೂ ಭೂಷಣ್ ನೃತ್ಯ ನಿರ್ದೇಶನವಿರುವ “ಆಲ್ಫಾ #ಮೆನ್ ಲವ್ ವೈಲೆನ್ಸ್#” ಚಿತ್ರಕ್ಕೆ ಜನಪ್ರಿಯ ಸಂಭಾಷಣೆಗಾರ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳು ಚಿತ್ರದಲ್ಲಿದ್ದು, ವಿಜಯ್, ವಿನೊದ್, ಅರ್ಜುನ್ ರಾಜ್ ಹಾಗೂ ಯೋಗಾನಂದ ಸಾಹಸ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಮೊದಲ ಪೋಸ್ಟರ್ ನಲ್ಲೇ ಮೋಡಿ ಮಾಡಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳು ಸದ್ಯದಲ್ಲೇ ಅನಾವರಣವಾಗಲಿದೆ.



