ಕಳೆದ ೩೦ ವರ್ಷಗಳಿಂದಲೂ ಅಂಬರೀಶ್ ಅವರ ಅಪ್ಪಟ ಅಭಿಮಾನಿಯಾಗಿರುವ ಸುಬ್ರಮಣ್ಯ(ಅಂಬಿ ಸುಬ್ಬಣ್ಣ) ಅವರೀಗ ತಮ್ಮ ಮಗನನ್ನುನಾಯಕನಾಗಿಸಿ ಹೊಸ ಚಲನಚಿತ್ರವೊಂದನ್ನು ನಿರ್ದೇಶಿಸಿದ್ದಾರೆ.ಅಲ್ಲದೆ ಅಂಬಿ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ತಮ್ಮ ಮಗನಹೊಸ ಚಿತ್ರದ ಚಿತ್ರೀಕರಣ ನಡೆಸಿದ್ದಾರಲ್ಲದೆ ಆ ಸಿನಿಮಾಗೆ” ಗಜೇಂದ್ರಕೇರಾಫ್ ದೊಡ್ಡರಸಿನಕೆರೆ” ಎಂಬ ಟೈಟಲ್ ಕೂಡ ಇಟ್ಟಿದ್ದಾರೆ.ಇದು ಹಳ್ಳಿಯೊಂದರಲ್ಲಿ ನಡೆಯುವ ಕಥೆಯಾಗಿದ್ದು ಊರಗೌಡನೊಬ್ಬ ಹಳ್ಳಿಯ ಮುಗ್ಧ ಜನರಿಗೆ ಬಡ್ಡಿಗೆ ಸಾಲಕೊಟ್ಟು ಅವರು ಹಿಂದಿರುಗಿಸದಿದ್ದಾಗ ಅವರ ಆಸ್ತಿಯನ್ನು ತನ್ನವಶ ಮಾಡಿಕೊಳ್ಳುತ್ತಾನೆ.ಆತನ ಮಗ ಕೂಡ ಒಬ್ಬ ರೌಡಿಯೇ. ಊರ ಹೆಣ್ಣುಮಕ್ಕಳಿಗೆ ತೊಂದರೆ ಕೊಡುವುದೇ ಆತನ ಕೆಲಸ. ಇನ್ನುಆತನ ಮಗಳೂ ಸಹ ಬಜಾರಿಯೇ.ಗೌಡನ ಭಯದಿಂದ ಮಗನನ್ನು ಸಿಟಿಗೆ ಕಳಿಸಿದ್ದ ತಾಯಿ ಜನರಕೋರಿಕೆಯ ಮೇರೆಗೆ ವಾಪಸ್ ಕರೆಸಿಕೊಳ್ಳುತ್ತಾಳೆ. ಈಗಾಗಲೇ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನುಮುಗಿಸಿಕೊಂಡಿರುವ ಗಜೇಂದ್ರ ಕೇರಾಫ್ ದೊಡ್ಡರಸಿನಕೆರೆ ಚಿತ್ರ ಸದ್ಯ ಸೆನ್ಸಾರ್ ಹಂತದಲ್ಲಿದ್ದು ನವೆಂಬರ್ ನಲ್ಲಿ ತೆರೆಕಾಣಲಿದೆ. ಲವ್ ಕಮ್ ಅಕ್ಷನ್ ಕಾಮಿಡಿ ಜಾನರ್ ನಲ್ಲಿರುವ ಈ ಚಿತ್ರದಲ್ಲಿಅಭಿಷೇಕ್ ಸುಬ್ಬಣ್ಣ ನಾಯಕನಾಗಿ ನಟಿಸಿದ್ದು, ನಾಯಕಿಯರಾಗಿ ವೇದಹಾಗೂ ನಿರೀಕ್ಷಾ ನಟಿಸಿದ್ದಾರೆ.