ವಾಷಿಂಗ್ಟನ್:ಸೌದಿ ಅರೇಬಿಯಾದಿಂದ ಮಂಗಳೂರು ಬಂದರಿಗೆ ಬರುತ್ತಿದ್ದ ಹಡಗೊಂದರ ಮೇಲೆ ಡ್ರೋನ್ ದಾಳಿ ನಡೆದ ಕುರಿತು ವರದಿಯಾಗಿತ್ತು. ಹೌದು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರುತ್ತಿದ್ದ ತೈಲ ಹಡಗಿನ ಮೇಲೆ ಅರಬ್ಬಿ ಸಮುದ್ರದಲ್ಲಿ ನಡೆದ ಡ್ರೋನ್ ದಾಳಿಯ ಹಿಂದೆ ಇರಾನ್ ಕೈವಾಡವಿತ್ತು ಎಂದು ಅಮೆರಿಕದ ವಿದೇಶಾಂಗ ಇಲಾಖೆ ಸ್ಫೋಟಕ ಹೇಳಿಕೆ ನೀಡಿದೆ.
ಗುಜರಾತ್ನಿಂದ 200 ಕಿ.ಮೀ. ದೂರದ ಅಂತಾರಾಷ್ಟ್ರೀಯ ಸಮುದ್ರದ ವಲಯದಲ್ಲಿ ಭಾರತಕ್ಕೆ ಬರುತ್ತಿದ್ದ ಲೈಬೀರಿಯಾದ ‘ಚೆಮ್ ಪ್ಲೂಟೋ’ ಹಡಗಿನ ಮೇಲೆ ನಿಗೂಢ ದಾಳಿ ನಡೆದಿತ್ತು.ಈ ಹಡಗು ಸೌದಿಯಿಂದ ನವ ಬಂಗಳೂರು ಬಂದರಿಗೆ ತೈಲ ಹೊತ್ತು ತರುತ್ತಿತ್ತು. ಈ ವೇಳೆ ಹಡಗಿಗೆ ಬೆಂಕಿ ಹೊತ್ತಿಕೊಂಡರೂ ಅದನ್ನು ಕೆಲವೇ ಕ್ಷಣಗಳಲ್ಲಿ ಶಮನ ಮಾಡಲಾಗಿತ್ತು.
ದಾಳಿ ಮಾಡಿದ್ಯಾರು ಎಂದು ಗೊತ್ತಾಗಿರಲಿಲ್ಲ. ಈ ಬಗ್ಗೆ ಅಮೆರಿಕ ವಿದೇಶಾಂಗ ವಕ್ತಾರರು ಹೇಳಿಕೆ ನೀಡಿ, ‘ಚೆಮ್ ಪ್ಲೂಟೋ’ ಹಡಗಿನ ಮೇಲೆ ಡ್ರೋನ್ ಹಾರಿ ಬಂದಿದ್ದು ಇರಾನ್ನಿಂದ’ ಎಂದಿದ್ದಾರೆ.