ಬೆಂಗಳೂರು: ರಾಜಕಾರಣದಲ್ಲಿ ಸಾರ್ಥಕ 50 ವರ್ಷಗಳ ಪೂರೈಕೆ ಹಿನ್ನೆಲೆಯಲ್ಲಿ ನಾಳೆ ಬಿ.ಎಸ್. ಯಡಿಯೂರಪ್ಪರಿಗೆ “ಅಭಿಮಾನೋತ್ಸವ” ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಮಂಡಳಿಯ ಸದಸ್ಯರು ಆಗಿರುವ ಬಿ.ಎಸ್.ಯಡಿಯೂರಪ್ಪ ಅವರು ಸಾರ್ಥಕ 50 ವರ್ಷ ರಾಜಕಾರಣದಲ್ಲಿ ಪೂರೈಕೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ನಾಳೆ ಕಾರ್ಯಕ್ರಮಕ್ಕೆ ಈಗಾಗಲೇ 10 ದಿನಗಳ ಹಿಂದೆಯಿAದಲೇ ವೇದಿಕೆ ನಿರ್ಮಾಣವಾಗಿದ್ದು, ಮೇ 26 ರಂದು ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಬಿಜೆಪಿ ನಾಯಕರುಗಳು. ಇನ್ನು ಮೂರು ಬೃಹತ್ ವೇದಿಕೆಗಳು ಚಿತ್ರದುರ್ಗದಲ್ಲಿ ನಿರ್ಮಾಣವಾಗಲಿವೆ. ನಾಳಿನ ಕಾರ್ಯಕ್ರಮಕ್ಕೆ ಇಂದೇ ಬಿಜೆಪಿ ನಾಯಕರುಗಳು ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
ಇಂದು ಕೂಡ ಚಿತ್ರದುರ್ಗದಲ್ಲಿ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದೇ ಚಿತ್ರದುರ್ಗಕ್ಕೆ ಬಿ. ಎಸ್.ಯಡಿಯೂರಪ್ಪ ಅವರು ತೆರಳಲಿದ್ದಾರೆ. ಇಂದು ಸಂಜೆ 4 ಘಂಟೆಗೆ ಪುರ ಪ್ರವೇಶ ಮಾಡಿ, ಕಾರ್ಯಕ್ರಮದಲ್ಲಿ ಭಾಗಿಯಾಗಿ ಚಿತ್ರದುರ್ಗದಲ್ಲೇ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಿಗ್ಗೆ ಯಡಿಯೂರಪ್ಪರಿಗೆ ಅಭಿನಂದನೆಗಳನ್ನು ಸಲ್ಲಿಸಲು ಆಗಮಿಸುವ ನಾಯಕರಿಗೆ ಸನ್ಮಾನಿಸಲು ಅವಕಾಶ ನೀಡಲಾಗಿದೆ. ಬಳಿಕ ಮಧ್ಯಾಹ್ನ 2 ಘಂಟೆಗೆ ವೇದಿಕೆ ಕಾರ್ಯಕ್ರಮ ಆರಂಭ. ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಇಲಾಖೆ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಘಂಟೆಗೆ ವೇದಿಕೆಯ ಕಾರ್ಯಕ್ರಮ ಆರಂಭವಾಗಲಿದೆ. ಮಧ್ಯಾಹ್ನ 3:45 ಕ್ಕೆ ವೇದಿಕೆಗೆ ಅಮಿತ್ ಶಾ ಆಗಮಿಸಲಿದ್ದಾರೆ. ಸಂಜೆ 4:30 ಕ್ಕೆ ಬೃಹತ್ ವೇದಿಕೆಯಲ್ಲಿ ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಬಳಿಕ ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಯಕರ್ತರು ಹಾಗೂ ಯಡಿಯೂರಪ್ಪರ ಅಭಿಮಾನಿಗಳನ್ನು ಉದ್ದೇಶಿಸಿ ಮಾತನ್ನಾಡಲಿದ್ದು, ಇದಾದ ಬಳಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ. ಸಂಜೆ 7:30 ರ ಸುಮಾರಿಗೆ ಕಾರ್ಯಕ್ರಮದ ಸಮಾಪ್ತಿಯಾಗಲಿದೆ.
ನಾಳೆ ಬಿಎಸ್ವೈ ಅಭಿಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ



