ಕೋಲಾರ : ರಾಜ್ಯಾದ್ಯಂತ ಇಂದು 10ನೇ ತರಗತಿ ಪರೀಕ್ಷೆಗಳು ಆರಂಭವಾಗಿದ್ದು, ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಸೆಂಟ್ ಜೋಸೆಫ್ ಶಾಲೆಯಲ್ಲಿ ವಿದ್ಯಾರ್ಥಿನಿ ಒಬ್ಬಳು ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದಿರುವ ಘಟನೆ ವರದಿಯಾಗಿದೆ.
ಇತ್ತೀಚಿಗೆ ಅಷ್ಟೇ ಅಪಘಾತದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಕುಸುಮ ಕಾಲು ಕಳೆದುಕೊಂಡಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ, ತಾಯಿ ಜೊತೆಗೆ ಅಂಬ್ಯೂಲೆನ್ಸ್ನಲ್ಲಿ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ವಿದ್ಯಾರ್ಥಿನಿಗೆ ಬಿಇಒ ಅನುಮತಿ ಕೊಟ್ಟಿದ್ದಾರೆ. ಕೆಜಿಎಫ್ ತಾಲೂಕಿನ ಚಿನ್ನಗನಹಳ್ಳಿ ನಿವಾಸಿ ಆಗಿರುವ ಕುಸುಮಾ ಆಂಬುಲೆನ್ಸ್ ನಲ್ಲಿ ಬಂದು ಪರೀಕ್ಷೆ ಬರೆದಿದ್ದಾಳೆ.
ಆಂಬ್ಯುಲೆನ್ಸ್ನಲ್ಲಿ ಬಂದು ಪರೀಕ್ಷೆಗೆ ಹಾಜರಾದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ



