ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳದ ಆತಂಕ ಹಿನ್ನೆಲೆಯಲ್ಲಿ ಇಂದು ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.ಸಭೆಯ ಬಳಿಕ ಕೊರೊನಾ ಸಂಬಂಧ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಂದಲೇ ನಿಖರ ಮಾಹಿತಿ ಲಭ್ಯವಾಗಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಇಂದು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಲಾಗುತ್ತಿದೆ.
ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಗೆ ಸಮಾಲೋಚನೆ ನಡೆಸಿ ಅಧಿಕಾರಿಗಳು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಮಾರ್ಗಸೂಚಿಯಲ್ಲಿ ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯಗೊಳಿಸುವ ಬಗ್ಗೆಯೂ ಚರ್ಚೆ. 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಮಾಸ್ಕ್ ಕಡ್ಡಾಯ.
ಸಾಮಾಜಿಕ ಅಂತರ, ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ, ಪರೀಕ್ಷೆಯಲ್ಲಿ ಹೆಚ್ಚಳ. ಹೀಗೆ ಹಲವು ವಿಚಾರಗಳ ಬಗ್ಗೆ ಇಂದಿನ ಸಲಹಾ ಸಮಿತಿಯ ಸದಸ್ಯರ ಜೊತೆಗೆ ಆರೋಗ್ಯ ಸಚಿವರ ಚರ್ಚೆ ನಡೆಸಿದ್ದಾರೆ.