ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಘೋರ ಘಟನೆ ಒಂದು ನಡೆದಿದ್ದು, ಬೆಂಗಳೂರಿನಿದ ಸ್ನೇಹಿತರ ಜೊತೆಗೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿ ಒಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಪ್ರವಾಸಿತಾಣವಾದ ಎಡಮುರಿ ಕಾವೇರಿ ನದಿಯಲ್ಲಿ ಈ ದುರಂತ ಸಂಭವಿಸಿದೆ.
ಬೆಂಗಳೂರಿನ ಇನ್ಫೋಸಿಸ್ ಉದ್ಯೋಗಿ ವಿಘ್ನೇಶ್ (25) ಎಂಬುವವರು ಶ್ರೀರಂಗಪಟ್ಟಣದ ಎಡಮುರಿ ಪ್ರವಾಸಿ ತಾಣದಲ್ಲಿ ಕಾವೇರಿ ನದಿಗೆ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅವರು, ನೀರಿನ ಹರಿವಿನ ಅಂದಾಜು ಸಿಗದೆ ದುರಂತ ಅಂತ್ಯ ಕಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದು, ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



