ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ತಡ ರಾತ್ರಿ ಸುಮಾರು 9 ಗಂಟೆಗೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಹದೇವ್(28) ಎಂಬಾತನೇ ಕೊಲೆಯಾದ ದುರ್ದೈವಿ.
ಈತನ ಸ್ನೇಹಿತರುಗಳು ಮತ್ತು ಇವರ ನಡುವೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ರಾತ್ರಿ ಮಾತಿನ ಚಿಕ್ಕಮಕಿ ನಡೆದು ಚುಂಚನಗಟ್ಟ ಮುಖ್ಯ ರಸ್ತೆ ಈಶ್ವರಿ ಲೇಔಟ್ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.
ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಮುಖದೊಮ್ಮೆ ದಾಖಲಾಗಿರುತ್ತದೆ.ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಅಪರಾಧಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.