ದೇವನಹಳ್ಳಿ : ಬಿಜೆಪಿಗೆ ಭಾರಿ ಬಹುಮತಗಳ ಅಂತರದಲ್ಲಿ ಮತ್ತೊಮ್ಮ ಅದಿಕಾರಕ್ಕೆ ಬರಲಿದ್ದು, ಬಿಜೆಪಿ?ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲ್ಲುವ ತಳಮಳ ಕಾಂಗ್ರೆಸ್ ನವರಲ್ಲಿ ಶುರುವಾಗಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಮುಖಂಡ ಯುವ ಮುಖಂಡ ಅಣ್ಣೇಶ್ವರ ಮಧು ತಿಳಿಸಿದರು.
ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮನೆ ಮನೆಗೆ ತೆರಳಿ ಕರಪತ್ರಗಳನ್ನು ನೀಡುವ ಮೂಲಕ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚಿಸಿದ ಬಳಿಕ ಮಾತನಾಡಿ, ಕಾಂಗ್ರೆಸ್ ನವರು ಬಿಟ್ಟಿ ಭಾಗ್ಯಗಳ ನೀಡಿ ಜನರನ್ನು ತಪ್ಪು ದಾರಿ ಕೇಳುತ್ತಿ ದ್ದಾರೆ ದೇಶದಲ್ಲಿ ಭ್ರಷ್ಟಾಚಾರ ರೈತ ಸರ್ಕಾರ ವಿದ್ದರೆ ಅದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವಾಗಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಬಹುಮತ ಸಿಗಲು ವಿಸ್ತಾರಕರೆ ಕಾರಣ. ಆದ್ದರಿಂದ ನಮ್ಮಲ್ಲೂ ವಿಸ್ತರಿಕಾ ಕಾರ್ಯಕ್ರಮ ಮಾಡಿ ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ ಬಿಜೆಪಿಗೆ ಬಹುಮತ ಸಿಗುವಂತೆ ಮಾಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು.
ಲೋಕಸಭೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಪಕ್ಷದ ಕಾರ್ಯಕರ್ತರು ಸಜ್ಜಾಗಿದ್ದಾರೆ ದೇವನಹಳ್ಳಿ ತಾಲೂಕಿನಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲೂ ಕೂಡ ಕರಪತ್ರಗಳನ್ನು ಹಂಚುವ ಮೂಲಕ ಪಕ್ಷವನ್ನು ಹಾಗೂ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿರುತ್ತಾರೆ.ಈ ಸಂದರ್ಭದಲ್ಲಿ ಅಣ್ಣೀಶ್ವರ ಮಧು, ಅತ್ತಿಬೆಲೆ ಅಶೋಕ್, ಮಧು ಐಟಿ ಮುನಿರಾಜು ಉಮೇಶ್ ನಾಗರಾಜ್ ಸೇರಿದಂತೆ ನೂರಾರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.