ಬೆಂಗಳೂರು: ಇಲ್ಲಿ ಮುಂಗಾರು ಕ್ಷೀಣಿಸಿ, ಕರ್ನಾಟಕದಲ್ಲಿ ಬರದ ಭೀತಿ ಆವರಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹನಿ ನೀರಿಗೂ ಜನ ಪರದಾಡುವ ಭೀಕರ ಪರಿಸ್ಥಿತಿ ಎದುರಾಗಿದೆ ಎಂದು ವಿಧಾನಪರಿಷತ್ನ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಆದರೆ ಈ ಕಳ್ಳ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದೇನು? ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದಾರೆ. ಕುಡಿಯುವ ನೀರಿನ ನೆಪವೊಡ್ಡಿ ಕಾವೇರಿ ಕೊಳ್ಳದ ಜೀವನಾಡಿ ಏಖS ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಪ್ರತಿದಿನ 2,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದು ಕನ್ನಡಿಗರ ಬೆನ್ನಿಗೆ ಚುಚ್ಚುತ್ತಿರುವ ಚೂರಿಯಲ್ಲದೆ ಮತ್ತಿನ್ನೇನು ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ ಅವರು, ಈ ನಾಡದ್ರೋಹಿ INCKarnataka ಪಕ್ಷದ ಇತಿಹಾಸವೇ ಇಷ್ಟು: ಅಧಿಕಾರವಿಲ್ಲದಾಗ: “ನಮ್ಮ ನೀರು ನಮ್ಮ ಹಕ್ಕು” ಅಂತ ನಾಟಕದ ಬೊಬ್ಬೆ ಹೊಡೆಯುತ್ತಾರೆ. ಅಧಿಕಾರ ಸಿಕ್ಕಾಗ: “ನಮ್ಮ ನೀರು ತಮಿಳುನಾಡಿನ ಹಕ್ಕು” ಅಂತ ಅಧಿಕಾರಕ್ಕಾಗಿ ತಮಿಳುನಾಡಿನ ಎದುರು ಸಂಪೂರ್ಣ ಶರಣಾಗತಿ ಆಗುವುದು. ನಾಡಿನ ಜನತೆಯ ಹಿತ ಕಾಯದೆ ಹೈಕಮಾಂಡ್ ಅಣತಿಯಂತೆ ತುಳುನಾಡಿನ ಜೊತೆ ರಾಜಿ ಮಾಡಿಕೊಳ್ಳುವುದು. ಕೇವಲ ರಾಜಕೀಯ ಮೈತ್ರಿಗಾಗಿ, ಅಧಿಕಾರದ ಆಸೆಗಾಗಿ ಅಂದು DMK, ಇಂದು TVK ಜೊತೆ ಮೈತ್ರಿ ಮಾಡಿಕೊಂಡು ಕನ್ನಡಿಗರಿಗೆ ಪದೇ ಪದೇ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಿಗರ ಹಿತಕ್ಕಿಂತ ಅಧಿಕಾರದ ಸ್ವಾರ್ಥವೇ ಹೆಚ್ಚಾಯಿತೇ? ಎಂದು ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ @DKShivakumar ಅವರೇ, ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆಯ ಬೀದಿನಾಟಕ ಮಾಡಿದ್ದರಲ್ಲ ಸ್ವಾಮಿ, ಈಗ ಯಾವ ಯಾತ್ರೆ ಮಾಡುತ್ತೀರಿ? ನೀರಿಲ್ಲದೆ, ಬೆಳೆಯಿಲ್ಲದೆ ಕಾವೇರಿ ಕೊಳ್ಳದ ನಮ್ಮ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಶವಯಾತ್ರೆ ಮಾಡ್ತೀರಾ? ಬೆಂಗಳೂರಿನ ಜನ ಟ್ಯಾಂಕರ್ ಮಾಫಿಯಾ ಸುಲಿಗೆಗೆ ಸಿಕ್ಕಿ ಪರದಾಡಿದರೆ ಟ್ಯಾಂಕರ್ ಯಾತ್ರೆ ಮಾಡುತ್ತೀರಾ? ಕನ್ನಡ ನಾಡಿನ ಜನತೆಗೆ ಕನಿಷ್ಠ ನೀರಿನ ಭದ್ರತೆ, ನೀರಿನ ಹಕ್ಕು ನೀಡಲಾಗದ ಈ ನಾಡದ್ರೋಹಿ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ.
ನಾಡದ್ರೋಹಿ ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ



