This is the title of the web page
This is the title of the web page

“ಮ್ಯಾಟ್ನಿ” ನಿರ್ಮಾಪಕರ ಮತ್ತೊಂದು ಚಿತ್ರ “ಎಲ್ಲಾ ನಿನಗಾಗಿ” .

ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ನಟ ಶ್ರೀಮುರಳಿ .

ವಿದ್ಯಾ ಶ್ರೀಮುರಳಿ ಅರ್ಪಿಸುವ, ಈ3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ “ಮ್ಯಾಟ್ನಿ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಈಗ ಅದೇ ಸಂಸ್ಥೆಯ ಲಾಂಛನದಲ್ಲಿ “ಎಲ್ಲಾ ನಿನಗಾಗಿ” ಎಂಬ ನೂತನ ಚಿತ್ರ ಆರಂಭವಾಗಿದೆ.

ವಿದ್ಯಾ ಶ್ರೀಮುರಳಿ ಅವರೆ ಈ ಚಿತ್ರವನ್ನೂ ಅರ್ಪಿಸುತ್ತಿದ್ದಾರೆ. ರಾಹುಲ್ ಆರ್ಕಾಟ್ ಹಾಗೂ ಧನ್ಯ ರಾಮಕುಮಾರ್ ಈ ಚಿತ್ರದ ನಾಯಕ – ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಕಾಶಿ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಹಾಗೂ ಶೀರ್ಷಿಕೆ ಅನಾವರಣ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ದೇವಸ್ಥಾನದಲ್ಲಿ ನೆರವೇರಿತು.

ಖ್ಯಾತ ನಟ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ “ಎಲ್ಲಾ ನಿನಗಾಗಿ” ಎಂದು ಹೆಸರಿಡಲಾಗಿದೆ. ಮೇ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.