ಬೆಂಗಳೂರು: ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ಎರಡೂ ಕಾಲುಗಳು ಕಟ್ ಆಗಿರುವ ಘಟನೆ ನೆಲಮಂಗಲ ಬಳಿಯ ಅರಿಶಿನಕುಂಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಿದ್ರೆಯ ಮಂಪರಿನಲ್ಲಿ ಅಪಘಾತ ಸಂಖಭವಿಸಿದೆ. ಸದ್ಯ ಲಾರಿ ಚಾಲಕನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ತುಮಕೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಸದ್ಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಎರಡೂ ಲಾರಿಗಳನ್ನ ತೆರವು ಮಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಚಾಲಕನ 2 ಕಾಲುಗಳು ಕಟ್



