ದೆಹಲಿ: ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ಗೆ 4ನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ.
ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇಡಿ ನೀಡಿರುವ ನಾಲ್ಕನೇ ಸಮನ್ಸ್ ಇದಾಗಿದ್ದು, ಇದಕ್ಕೂ ಮುನ್ನ ನವೆಂಬರ್ 2 ರಂದು, 21ರಂದು ಹಾಗೂ ಜನವರಿ 3 ರಂದು ಮೂರು ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.
ಈ ನಾಲ್ಕನೇ ಸಮನ್ಸ್ ಬಳಿಕ ಅರವಿಂದ್ ಕೇಜ್ರಿವಾಲ್ ಇಡಿ ಮುಂದೆ ಹಾಜರಾಗುತ್ತಾರೋ ಇಲ್ಲವೋ ಕಾದುನೋಡಬೇಕಿದೆ. ಕೊನೆಯ ಸಮನ್ಸ್ ನಂತರ ಆಮ್ ಆದ್ಮಿ ಪಕ್ಷವು ಇಡಿಯೊಂದಿಗೆ ಸಹಕರಿಸಲು ಬಯಸುತ್ತದೆ ಎಂದು ಹೇಳಿತ್ತು. ನಾಲ್ಕನೇ ಸಮನ್ಸ್ಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಕೇಜ್ರಿವಾಲ್ ಬಂಧಿಸಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ, ಇಷ್ಟೇ ಅಲ್ಲದೆ ವಿಚಾರಣೆ ನೆಪದಲ್ಲಿ ಅವರನ್ನು ಕರೆಸಿ ಬಂಧಿಸಲು ಇಡಿ ನಿರ್ಧರಿಸಿದೆ ಎನ್ನಲಾಗಿದೆ.