ಶಿವಮೊಗ್ಗ: ಈಗಾಗಲೇ ರಾಜ್ಯದ ಕೋಲಾರ ಜಿಲ್ಲೆಯ ಮಾಲೂರು ಸಮೀಪದ ಮೊರಾರ್ಜಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಅಂಧ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚ ಸ್ವಚ್ಚಗೊಳಿಸಿದ ಪ್ರಕರಣ ಮಾಸುವ ಮುನ್ನವೇ ಅಂತಹದೇ ಮತ್ತೊಂದು ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದನೇರಲೆಕೆರೆ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚ ಸ್ವಚ್ಚಗೊಳಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಮಕ್ಕಳು ಶೌಚ ಸ್ವಚ್ಚಗೊಳಿಸುತ್ತಿರುವ ವೀಡಿಯೊ ಜಾಲತಾಣಗಳಲ್ಲಿ ಹರೆದಾಡಿದೆ ಎನ್ನಲಾಗಿದೆ.
ಶಾಲಾ ಮುಖ್ಯೋಪಾಧ್ಯಾಯ ಶಂಕರಪ್ಪ ಸೇರಿದಂತೆ ಸಹ ಶಿಕ್ಷಕರ ವಿರುದ್ಧ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಸೂಕ್ತಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.