ದೇವನಹಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ವಿರುದ್ದ ಕೆಲಸ ಮಾಡಲಾಗುತ್ತಿದ್ದು, ರೈತರಿಗೆ ವಿವಿಧ ಯೋಜನೆಗಳನ್ನು ಬಿಜೆಪಿ ಸರ್ಕಾರ ತಂದಿತ್ತು ಅವುಗಳನ್ನೆಲ್ಲಾ ರದ್ದು ಮಾಡುವುದರ ಮೂಲಕ ರೈತರಿಗೆ ಭಾರಿ ಅನ್ಯಾಯ ಮಾಡುತ್ತಿದೆ ಲಜ್ಜೆಗೆಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಕೆ.ಪಿ.ಭೃಂಗೇಶ್ ತಿಳಿಸಿದರು.
ಅವರು ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ರಾಜೀವ್ ಸುಲೋಚನ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿ ರೈತರ ಉದ್ದಾರಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಹಲವು ರೈತಪರವಾದ ಯೋಜನೆಗಳು ಕಾರ್ಯರೂಪದಲ್ಲಿ ಇತ್ತು ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಎಲ್ಲಾ ರೈತ ಪರವಾದ ಯೋಜನೆಗಳನ್ನು ಕೈಬಿಡುತ್ತಾ ರೈತರ ಮಕ್ಕಳಿಗೆ ವಿದ್ಯಾಸಿರಿ, ರೈತರಿಗೆ ಜಾಮೀನುರಹಿತ ಬೆಳೆ ಸಾಲ, ಬಿಜೆಪಿ ಸರ್ಕಾರದ ನೀರಾವರಿ ಯೋಜನೆ,
ರೈತಸಂಪದ ಯೋಜನೆ ಕೈಬಿಟ್ಟು ರೈತ ವಿರೋಧಿ ಸರ್ಕಾರ ಎಂದು ಪಟ್ಟಕಟ್ಟಿಕೊಂಡಿತು, ರೈತ ಉತ್ಪಾದಕ ಸಂಸ್ಥೆಗಳಿಗೆ ಬಿಡುಗಡೆ ಮಾಡಬೇಕಾದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲಾ ಮುಂಗಾರು ಆರಂಭವಾಗಿದ್ದು ರೈತರಿಗೆ ಸರಿಯಾದ ಸಮಯದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದೊರೆಯುವಂತೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರದಿಂದ ರಚನೆಯಾಗಿರುವ ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಮನವಿ ನೀಡುತ್ತಿರುವುದಾಗಿ ತಿಳಿಸಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 490 ಅಮೃತ ರೈತ ಉತ್ಪಾದಕ ಸಂಸ್ಥೆಗಳು ರಚನೆಯಾಗಿದ್ದು 150 ಕೋಟಿ ಹಣ ಕ್ರೂಢೀಕರಣದಲ್ಲಿ ಬಿಜೆಪಿ ಸರ್ಕಾರ ಶೇ. 12 ಬಿಡುಗಡೆ ಮಾಡಿತ್ತು ಆದರೆ ಈಗಿನ ಕಾಂಗ್ರೆಸ್ ಸರ್ಕಾರ ರೈತರಿಗಾಗಿ ಏನೂ ಮಾಡದೇ ಮಲತಾಯಿ ಧೋರಣೆ ಮಾಡುತ್ತಿದೆ, ಇದರಿಂದ 10 ಲಕ್ಷ ರೈತರಿಗೆ ಮತ್ತು 12 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ನಿರ್ದೇಶಕರಿಗೆ ತೊಂದರೆಯಾಗಿದೆ, ಹಾಗೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಹಾಲು ಉತ್ಪಾದಕರಿಗೆ 5 ರೂ ಸಹಾಯಧನ ನೀಡಿಲ್ಲಾ ಇವೆಲ್ಲವನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ರಾಜ್ಯ ಮಟ್ಟದಲ್ಲಿ ಭೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಈ ಸಮಯದಲ್ಲಿ ರಾಜೀವಲೋಚನ ಮಾತನಾಡಿ ನೀವು ನೀಡಿರುವ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಹಾಗೂ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಜಗದೀಶ್ ಚೌದರಿ, ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಮುಖಂಡ ರಾದ ಕಾಳಿ ಮುನಿರಾಜು, ಮುನಿರಾಜು, ನಂಜೇಗೌಡ, ಅಶ್ವಥ್ಗೌಡ, ಶಿವರಾಜ್, ರಮೇಶ್, ಹಾಗೂ ನಾಲ್ಕು ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.