ದಾವಣಗೆರೆ: ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ವಿರುದ್ಧ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದಕ್ಕೆ ಪೂರಕವಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಕ್ರೋಚ್ ಪಾರ್ಟಿ ಹೆಸರಿನ ಎಕ್ಸ್ನಲ್ಲಿ ಆಡಿಯೋ ರಿಲೀಸ್ ಆಗಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದೆ.



