ದೆಹಲಿ: ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕಿಳಿಯಲು ನಿರ್ಧಾರ ಕೈಗೊಂಡಿವೆ. ದೆಹಲಿಯಲ್ಲಿಂದು ಎರಡು ಪಕ್ಷಗಳ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.
ದೆಹಲಿಯಲ್ಲಿ ಏಳು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ನಾಲ್ಕು ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ . ಹರಿಯಾಣದಲ್ಲಿ 9 ಕ್ಷೇತ್ರದಲ್ಲಿಕಾಂಗ್ರೆಸ್, ಒಂದು ಕ್ಷೇತ್ರದಲ್ಲಿ ಆಮ್ ಆದ್ಮಿಪಕ್ಷ ಸ್ಪರ್ಧಿಸಲಿದ್ದು, ಚಂಡಿಗಡ ಹಾಗೂ ಗೋವಾದಲ್ಲಿ ಎಲ್ಲಾ ಕ್ಷೇತ್ರಗಳಲ್ಲು ಕಾಂಗ್ರೆಸ್ ಪಕ್ಷ ಸ್ಪರ್ಧಾಕಣಕ್ಕಿಳಿಯಲಿದೆ ಎಂದು ಪ್ರಕಟಿಸಿದ್ದಾರೆ.