ಬೆಂಗಳೂರು: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ ನಮ್ಮ ದೇವೆಗೌಡ ಅಪ್ಪಾಜಿ ಕ್ಯಾಂಟೀನ್ ನಡೆಸುವುದು ಕಷ್ಟವಾಗುತ್ತಿದ್ದು, ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂದು ಎಂಎಲ್ಸಿ ಟಿ ಶರವಣ ಅವರು ತಿಳಿಸಿದ್ದಾರೆ.
ಹಸಿದವರಿಗೆ ಅತಿ ಕಡಿಮೆ ಬೆಲೆಯಲ್ಲಿ ಊಟ, ತಿಂಡಿ ಒದಗಿಸುವ ಸಲುವಾಗಿ ೨೦೧೭ ರಿಂದ ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ನಡೆಸುತ್ತಿದ್ದೇನೆ. ಗ್ಯಾಸ್ ಸಿಲಿಂಡರ್ ಪೂರೈಕೆ ಯಥಾ ಸ್ಥಿತಿಗೆ ಮರಳಿದ ನಂತರ ಎಂದಿನAತೆ ಕ್ಯಾಂಟೀನ್ ಮರು ಪ್ರಾರಂಭವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.



