ರಾಮನಗರ: ಜಿಲ್ಲೆಯ ಬಿಸಿಎಂ ಹಾಸ್ಟೆಲ್ಗಳಲ್ಲಿನ ಸಮಸ್ಯೆ ಸರಿಪಡಿಸುವಂತೆ, ಅಧಿಕಾರಿಗಳು ಮತ್ತು ನೌಕರರ ನಡುವಿನ ವೈಮನಸ್ಸಿನ ಸಂಘರ್ಷಕ್ಕೆ ವಿದ್ಯಾರ್ಥಿಗಳನ್ನು ದಾಳವನ್ನಾಗಿ ಬಳಸಿಕೊಳ್ಳುತ್ತಿರುವ ವಾರ್ಡನ್ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ಕನ್ನಡಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಕಾರಿ ಶಿವಾನಂದ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಹಲವು ಹಾಸ್ಟೆಲ್ಗಳಲ್ಲಿ ರಾತ್ರಿ ಊಟ ನೀಡುವ ಸಂದರ್ಭದಲ್ಲಿ ವಾರ್ಡನ್ಗಳು ಗೈರು ಹಾಜರಾಗುತ್ತಿದ್ದಾರೆ. ಇದೇ ಮಾದರಿಯಲ್ಲಿ ಹಾಸ್ಟೆಲ್ ಒಂದರಲ್ಲಿ ವಾರ್ಡನ್ ತನ್ನ ಕರ್ತವ್ಯದ ಅವಯನ್ನು ಬೆಳಗ್ಗೆ 7.30ರಿಂದ ಮಧ್ಯಾಹ್ನ 3.00ಗಂಟೆ ವರೆಗೆ ಮಾತ್ರ ಎಂದು ಬೋರ್ಡ ಬರೆಸಿ ತಾವೇ ಖುದ್ದು ಸಹಿ ಮಾಡಿ ಹೊರಗಡೆ ಪ್ರದರ್ಶನ ಮಾಡಿದ್ದಾರೆ.
ಸರಕಾರದ ಸುತ್ತೋಲೆ ಪ್ರಕಾರ ಬೆಳಗ್ಗೆ 7.30ರಿಂದ ರಾತ್ರಿ 10ಗಂಟೆಯವರೆಗೆ ಕರ್ತವ್ಯದ ಅವ ಇದ್ದರೂ ಕೂಡಯಾವೊಬ್ಬ ವಾರ್ಡನ್ ಈ ನಿಯಮ ಪಾಲನೆ ಮಾಡುತ್ತಿಲ್ಲ.ಬಯೋಮೆಟ್ರಿಕ್ ಹಾಜರಾತಿಯನ್ನು ಕೆಲವು ವಸತಿ ನಿಯಲಗಳಲ್ಲಿ ಕಾಟಾಚಾರಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ.
ಇದು ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಡಲಾಗುತ್ತಿದೆ. ಜತೆಗೆ, ಊಟದ ಮೆನುವಿನಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ. ತಾಲೂಕಿನ ಒಂದು ಹಾಸ್ಟೆಲ್ನಲ್ಲಿ ಮಾತ್ರ ಪ್ರತಿದಿನ ಮೊಟ್ಟೆ ನೀಡುವ ವ್ಯವಸ್ಥೆ ಇದೆ. ಉಳಿದ ಹಾಸ್ಟೆಲ್ಗಳಲ್ಲಿ ಈ ವ್ಯವಸ್ಥೆ ಇರುವುದಿಲ್ಲ. ಈ ರೀತಿಯ ತಾರತಮ್ಯವನ್ನು ಹೋಗಲಾಡಿಸಿ, ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ರಾಮನಗರ ತಾಲೂಕಿನ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲವೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಅದರಲ್ಲೂ ರಾತ್ರಿಯ ಊಟದಲ್ಲಿ ಗುಣಮಟ್ಟದ ಊಟ ನೀಡುತ್ತಿಲ್ಲ ವೆಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂದುಮನವಿಪತ್ರದಲ್ಲಿ ಆರೋಪಿಸಲಾಗಿದೆ.
ಹೆಚ್ಚಿನ ಹಾಸ್ಟೆಲ್ಗಳಲ್ಲಿ ಖಾಯಂ ಅಡುಗೆಅವರ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ವಸತಿನಿಲಯದಲ್ಲಿನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.ಈ ವೇಳೆ ವಿವಿಧ ಕನ್ನಡ ಪರ ಸಂಘಟನೆಯ ಮುಖಂಡರಾದ ಕ.ರ.ವೇ ಸ್ವಾಭಿಮಾನಿ ಬಣದ ರಾಜ್ಯ ಉಸ್ತುವಾರಿ ಅಧ್ಯಕ್ಷ ಶಿವುಗೌಡ, ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಜಗದೀಶ, ಕ.ರ.ವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ, ರಾಜು, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಯೋಗೇಶ್, ಜನಮನ ವೇದಿಕೆರಾಜ್ಯಾಧ್ಯಕ್ಷ, ಕನ್ನಡ ರಾಜು, ಕ.ರ.ವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಇದ್ದರು.